ಸೆಪ್ಟೆಂಬರ್​ 18ರಿಂದ 22ರವರೆಗೆ ಸಂಸತ್​ ವಿಶೇಷ ಅಧಿವೇಶನ

Parliament Session
Published on

ನವದೆಹಲಿ: ಸೆಪ್ಟೆಂಬರ್​ 18ರಿಂದ 22ರವರೆಗೆ ಐದು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿರುವುದಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಶಿ ತಿಳಿಸಿದ್ದಾರೆ.

ಸೆಪ್ಟೆಂಬರ್​ 9 ಹಾಗೂ 10ರಂದು ದೆಹಲಿಯಲ್ಲಿ ನಡೆಯುವ ಜಿ-20 ಶೃಂಗಸಭೆ ಬಳಿಕ ಅಧಿವೇಶನ ಕರೆಯಲಾಗಿದ್ದು, ಕಾರ್ಯಸೂಚಿ ಏನು ಎಂಬುದರ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ.

ಸಂಸತ್ತಿನ ವಿಶೇಷ ಅಧಿವೇಶನವನ್ನು ಸಪ್ಟೆಂಬರ್ 18 ರಿಂದ 22ರ ವರೆಗೆ ಕರೆಯಲಾಗಿದ್ದು ಒಟ್ಟು 5 ಅವಧಿಗಳು ಇರಲಿವೆ. 17ನೇ ಲೋಕಸಭೆಯ 13ನೇ ಅಧಿವೇಶನ ಹಾಗೂ ರಾಜ್ಯಸಭೆಯ 261 ನೇ ಅಧಿವೇಶನ ಇದಾಗಿರಲಿದೆ. ಅಮೃತ್ ಕಾಲದ ಈ ಮಹತ್ವದ ಕಾಲಫಟ್ಟದಲ್ಲಿ ಒಂದು ರಚನಾತ್ಮಕ ಅಧಿವೇಶವನ್ನು ಮುನ್ನೋಡುತ್ತಿದ್ದೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net