More

    ಪರೀಕ್ಷೆ ಎಂಬ ಭಯ ತೊರೆಯಲು ಸಲಹೆ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಶಿಬಿರ

    ದೇವನಹಳ್ಳಿ: ಪರೀಕ್ಷೆ ಎಂಬ ಭಯ ತೊರೆದು ಹೇಗೆ ಬರೆಯಬೇಕು, ಉತ್ತಮ ಫಲಿತಾಂಶ ಬರಲು ಏನು ಮಾಡಬೇಕು ಎಂಬುದರ ಬಗ್ಗೆ ತಜ್ಞ ಸಂಪನ್ಮೂಲ ವ್ಯಕ್ತಿಗಳಿಂದ ಮಕ್ಕಳಲ್ಲಿ ಉತ್ಸಾಹ ತುಂಬುವ ಜ್ಞಾನ ಹಂಚಲಾಗುವುದು ಎಂದು ಅರುಂಧತಿ ಸೇವಾಸಂಸ್ಥೆ ಅಧ್ಯಕ್ಷ ಮುನಿಕೃಷ್ಣ ಮಾತನಾಡಿದರು.

    ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಅರುಂಧತಿ ಸೇವಾ ಸಂಸ್ಥೆಯಿಂದ ಗುರುವಾರ ಹಮ್ಮಿಕೊಂಡಿದ್ದ ಪ್ರೌಢಶಾಲಾ ವಿಭಾಗದ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಉಚಿತ ನೈಪುಣ್ಯ ಪರೀಕ್ಷಾ ಪೂರ್ವ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

    ಸಂಸ್ಥೆಯಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಪ್ರತಿವರ್ಷ ಹಲವು ಕಾರ್ಯಕ್ರಮ ರೂಪಿಸುತ್ತಿದೆ, ಆಯ್ದ ಶಾಲೆಗಳಿಗೆ ವಿಜಯವಾಣಿ ವಿದ್ಯಾರ್ಥಿ ಉದ್ಯೋಗ ಮಿತ್ರ ಸಂಚಿಕೆಯನ್ನು ಉಚಿತವಾಗಿ ಸಂಸ್ಥೆಯಿಂದ ನೀಡಲಾಗುತ್ತದೆ ಎಂದು ತಿಳಿಸಿದರು.
    ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ತಾಲೂಕಿನ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಪುರಸ್ಕರಿಸುವ ಕೆಲಸ ಮಾಡಲಾಗುತ್ತಿದೆ. ಒಟ್ಟಾರೆ ಶಾಲಾಕಾಲೇಜು ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಪೂರಕವಾದ ಕಾರ್ಯಕ್ರಮಗಳನ್ನು 8 ವರ್ಷಗಳಿಂದ ಮಾಡಲಾಗುತ್ತಿದೆ ಎಂದರು.
    ಸಂಪನ್ಮೂಲ ವ್ಯಕ್ತಿ ಡಾ.ಎಚ್.ತಿರುಮಳೇಶ್, ವಿದ್ಯಾರ್ಥಿಗಳು ಏಕೆ ಓದಬೇಕು. ಏನು ಓದಬೇಕು ಪರೀಕ್ಷೆ ಹೇಗೆ ಬರೆಯಬೇಕು, ನಮಗೆ ಏತಕ್ಕಾಗಿ ವಿದ್ಯೆಬೇಕು ಎಂಬ ಬಗ್ಗೆ ಅರಿವು ಮೂಡಿಸಿದರು.

    ಉಪಪ್ರಾಂಶುಪಾಲ ಕೆ.ಬಸವರಾಜ್, ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮೀನಾರಾಯಣಬಾಬು, ಅರುಂಧತಿ ಸಂಸ್ಥೆ ನಿಕಟ ಪೂರ್ವ ಅಧ್ಯಕ್ಷ ಡಿ.ಎಂ.ವೇಣುಗೋಪಾಲ್, ಕಾರ್ಯಾಧ್ಯಕ್ಷ ಎಂ.ಮಂಜುನಾಥ್, ಗೌರವಾಧ್ಯಕ್ಷ ಜಾಲಿಗೆ ಮುನಿರಾಜು, ಪದಾಧಿಕಾರಿಗಳಾದ ಎಸ್.ಎಂ.ಆನಂದ್, ಹರ್ಷವರ್ಧನ, ನರಸಿಂಹಯ್ಯ, ಜೆಸಿಐ ಅಧ್ಯಕ್ಷ ನರಸಿಂಹಮೂರ್ತಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts