ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿ

ಹಾವೇರಿ: ಮಕ್ಕಳು ರಜಾ ದಿನಗಳಲ್ಲಿ ಸಮಯ ವ್ಯರ್ಥ ಮಾಡದೇ ಶಿಬಿರದಲ್ಲಿ ಪಾಲ್ಗೊಂಡು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿ.ಪಂ. ಸಿಇಒ ಕೆ. ಲೀಲಾವತಿ ಹೇಳಿದರು.

ಸ್ಥಳೀಯ ನಾಗೇಂದ್ರನಮಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ. 8ರಲ್ಲಿ ಜಿ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ಬೇಸಿಗೆ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ವಯಕ್ತಿಕ ಸ್ವಚ್ಛತೆ ಹಾಗೂ ಪರಿಸರ ಕಾಳಜಿ ಬಗ್ಗೆ ಅರಿವು ಹೊಂದಬೇಕು. ಜೊತೆಗೆ ವಿವಿಧ ಕೌಶಲ್ಯಗಳನ್ನು ಶಿಬಿರಗಳ ಮೂಲಕ ರೂಢಿಸಿಕೊಳ್ಳಬೇಕು ಎಂದರು.

ಡಿಡಿಪಿಐ ಅಂದಾನೆಪ್ಪ ವಡಗೇರಿ ಮಾತನಾಡಿ, ಶಿಬಿರದಲ್ಲಿ ಮಕ್ಕಳಿಗೆ ವಿವಿಧ ವಿಷಯಗಳಲ್ಲಿ ತರಬೇತಿ ನೀಡಲಾಗುವುದು ಎಂದರು.

ಆಶಾಕಿರಣ ಸಂಸ್ಥೆಯ ಮುತ್ತುರಾಜ ಮಾದರ, ಗೋವಿಂದಪ್ಪ ದೊಡ್ಡಮನಿ, ಪರಮೇಶ್ವರ ಬಡಿಗೇರ, ಉಮೇಶ ಮರೋಳ, ಸಿ.ಜಿ. ಬ್ಯಾಡಗಿ, ವಾಣಿ ಕೋತಂಬರಿ, ಸುಧಾಬಾಯಿ, ಎಸ್.ಎಂ. ಬಡಿಗೇರ, ಮುಖ್ಯೋಪಾಧ್ಯಯ ಅಶೋಕ ಹಾವನೂರ ಉಪಸ್ಥಿತರಿದ್ದರು. ಬಿಆರ್​ಸಿ ಸಿ.ಎಸ್. ಭಗವಂತಗೌಡ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಸಿ. ಶಿವಣ್ಣ ಸ್ವಾಗತಿಸಿದರು.

Leave a Reply

Your email address will not be published. Required fields are marked *