More

  ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಲಿ

  ಸರಗೂರು: ಮಕ್ಕಳ ಬಗ್ಗೆ ಪಾಲಕರಿಗೆ ಇರುವಷ್ಟೇ ಕಾಳಜಿ ಶಿಕ್ಷಕರಿಗೂ ಇರುತ್ತದೆ ಎಂದು ಹಾದನೂರು ಗ್ರಾಪಂ ಉಪಾಧ್ಯಕ್ಷ ಪ್ರಕಾಶ್ ಹೇಳಿದರು.
  ತಾಲೂಕಿನ ಹಾದನೂರು ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಹೆಚ್ಚಿನ ಸಮಯವನ್ನು ಶಿಕ್ಷಕರೊಂದಿಗೆ ಶಾಲೆಯಲ್ಲಿ ಕಳೆಯುತ್ತಾರೆ. ಮಕ್ಕಳ ಮೇಲೆ ಶಿಕ್ಷಕರು ಪ್ರಭಾವ ಬೀರಲಿದ್ದಾರೆ. ಹೀಗಾಗಿ ಮಕ್ಕಳ ಬಗ್ಗೆ ಶಿಕ್ಷಕರು ಕಾಳಜಿ ವಹಿಸಲಿದ್ದಾರೆ ಎಂದರು.

  ಗ್ರಾಪಂ ಸದಸ್ಯ ಶಿವರಾಜು ಮಾತನಾಡಿ, ಮಕ್ಕಳಿಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯೂ ಮುಖ್ಯ. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು. ಉತ್ತಮ ಶಿಕ್ಷಣದೊಂದಿಗೆ ಕ್ರೀಡೆಯಲ್ಲಿ ಭಾಗವಹಿಸಿ ದೈಹಿಕವಾಗಿ ಆರೋಗ್ಯ ಹೊಂದಬೇಕು. ವಿದ್ಯಾರ್ಥಿ ಜೀವನದಿಂದಲೇ ಸಮಯ ಪಾಲನೆ, ಶಿಸ್ತು ಮೈಗೂಡಿಕೊಳ್ಳಬೇಕು. ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದರ ಜತೆಗೆ ಪ್ರಾಪಂಚಿಕ ಜ್ಞಾನ ಬೆಳೆಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧರಾಗಬೇಕು. ಕೀಳಿರಿಮೆ ಬಿಟ್ಟು, ಗುರು-ಹಿರಿಯರನ್ನು ಗೌರವಿಸಬೇಕು ಎಂದು ಸಲಹೆ ನೀಡಿದರು.

  ಶಾಲೆಯ ಮುಖ್ಯ ಶಿಕ್ಷಕಿ ಶಾಂತಮ್ಮ, ಎಸ್‌ಡಿಎಂಸಿ ಅಧ್ಯಕ್ಷ ಮಹೇಂದ್ರ, ಗ್ರಾಪಂ ಸದಸ್ಯರಾದ ರತ್ನಮ್ಮ ರಾಜೇಶ್, ಶಿವರಾಜು, ಭಾಗ್ಯಾ, ರಾಜಯ್ಯ, ಶಿವಮೂರ್ತಿ, ಸತೀಶ್ ಸಿದ್ದರಾಜು, ಮುಖಂಡರಾದ ಚಿಕ್ಕಸಿದ್ದಯ್ಯ, ಮಹಾದೇವಯ್ಯ, ಮಹದೇವಸ್ವಾಮಿ, ಮಹಾದೇವ, ಗ್ರಾಪಂ ಮಾಜಿ ಅಧ್ಯಕ್ಷ ಸಿದ್ದರಾಜು, ಚಿನ್ನಯ್ಯ, ಪುಟ್ಟಸ್ವಾಮಿ, ಮರಿಸ್ವಾಮಿ, ಶಿವು, ನಂಜುಂಡಿ, ಪಾಪಣ್ಣ, ಸ್ವಾಮಿ, ಆಶಾ, ರೇಣುಕಾ, ಹೊಂಬಳಮ್ಮ, ಶಿಕ್ಷಕ ಶಾಂತಮ್ಮ, ಸಿದ್ದಯ್ಯ, ಪ್ರಸನ್ನಕುಮಾರ್, ಕೃಷ್ಣಮೂರ್ತಿ, ಗೌರೀಶ್, ಹೇಮಾವತಿ ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts