16 C
Bangalore
Thursday, December 12, 2019

ಅನಂತಕುಮಾರ್ ನಿಧನಕ್ಕೆ ಕಂಬನಿ ಮಿಡಿದ ನಗರ

Latest News

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

ಡಿಸೆಂಬರ್ 14 ರಂದು ಕರ್ಕಿ ಕಾವ್ಯ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ: ಡಾ. ಡಿ.ಎಸ್. ರ್ಕ ಸಾಹಿತ್ಯ ವೇದಿಕೆಯಿಂದ ಜಗದೀಶ ಶೆಟ್ಟರ್ ದತ್ತಿ ಆಶ್ರಯದಲ್ಲಿ ಕೊಡಮಾಡುವ ಪ್ರಸಕ್ತ ಸಾಲಿನ ಡಾ. ಡಿ.ಎಸ್. ರ್ಕ ಕಾವ್ಯ ಪ್ರಶಸ್ತಿಯು...

ಮೈಸೂರು: ಕೇಂದ್ರ ಸಚಿವ ಅನಂತಕುಮಾರ್ ನಿಧನಕ್ಕೆ ನಗರದಲ್ಲಿ ಅನೇಕ ಮುಖಂಡರು ಪಕ್ಷಾತೀತವಾಗಿ ಕಂಬಿನಿ ಮಿಡಿದರು. ಅವರ ನಿಧನಕ್ಕೆ ಸಂತಾಪ ಸೂಚಿಸಿ, ಅವರ ಸೇವೆ, ಕೊಡುಗೆ, ಅವರೊಂದಿಗೆ ಒಡನಾಟವನ್ನು ಸ್ಮರಿಸಿದರು.

‘ರಾಷ್ಟ್ರ ರಾಜಕಾರಣದಲ್ಲಿ ಉತ್ತುಂಗದ ನಾಯಕರಾಗಿದ್ದ ಅವರು ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ನೀಡಿರುವ ಕೊಡುಗೆ ಅಪಾರ’ ಎಂದು ಸಂಸದ ಆರ್.ಧ್ರುವನಾರಾಯಣ್ ಹೇಳಿದರು.

‘ಸಾಮಾನ್ಯ ಕುಟುಂಬ ಹಿನ್ನೆಲೆಯನ್ನು ಹೊಂದಿರುವ ಅವರು ರಾಷ್ಟ್ರಮಟ್ಟದ ನಾಯಕರಾಗಿ ಉತ್ತಮ ಸಂಸದೀಯ ಪಟುವಾಗಿ ಬೆಳೆದಿದ್ದು ವಿಶೇಷ. ರಾಷ್ಟ್ರೀಯತೆಯಲ್ಲಿ ಬಲವಾದ ನಂಬಿಕೆಯಿದ್ದ ಇವರು ಮೇರು ವ್ಯಕ್ತಿತ್ವದ ರಾಜಕಾರಣಿ. ಇವರ ನಿಧನದಿಂದ ರಾಜಕಾರಣಕ್ಕೆ ನಷ್ಟ’ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಹೇಳಿದ್ದಾರೆ. ಅಂತೆಯೇ ಬಿಜೆಪಿಯ ಎಸ್.ಜಯಪ್ರಕಾಶ್ ಕೂಡ ಸಂತಾಪ ಸೂಚಿಸಿದರು.

ಸಂತಾಪ ಸಭೆ:  ಜೆಎಸ್‌ಎಸ್ ಮಹಾವಿದ್ಯಾಪೀಠದಲ್ಲಿ ಸಭೆ ನಡೆಸಿ ಅನಂತಕುಮಾರ್ ಅವರಿಗೆ ಸಂತಾಪ ಸಲ್ಲಿಸಲಾಯಿತು. ‘ಸುತ್ತೂರು ಮಠದೊಂದಿಗೆ ಉತ್ತಮ ಬಾಂಧವ್ಯ ಇರಿಸಿಕೊಂಡಿದ್ದ ಅವರು ಹಿರಿಯ-ಕಿರಿಯರನ್ನು ಗೌರವ ಹಾಗೂ ಸಮಾನ ಭಾವದಿಂದ ಕಾಣುತ್ತಿದ್ದರು. ಅಲ್ಲದೆ, ಮೈಸೂರಿನ ವಿಮಾನ ನಿಲ್ದಾಣ ಮೇಲ್ದರ್ಜೆಗೆ ಏರಲು ಅವರು ಕಾರಣ’ ಎಂದು ವಿದ್ಯಾಪೀಠದ ಕಾರ್ಯದರ್ಶಿ ಪ್ರೊ.ಎಸ್.ಪಿ.ಮಂಜುನಾಥ್ ಹೇಳಿದರು.

‘ಅನಂತಕುಮಾರ್ ಉತ್ತಮ ವಾಗ್ಮಿಯಾಗಿದ್ದರು. ನಮ್ಮ ದೇಶದ ಪ್ರಧಾನ ಮಂತ್ರಿಗೂ ಇವರಿಗೂ ಉತ್ತಮ ಸ್ನೇಹವಿತ್ತು’ ಎಂದು ವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರಮಠ ಹೇಳಿದರು.

‘ವಿದ್ಯಾರ್ಥಿಯಾಗಿದ್ದಾಗಲೇ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಆರ್‌ಎಸ್‌ಎಸ್‌ನೊಂದಿಗೆ ಉತ್ತಮ ಸಂಪರ್ಕ ಇಟ್ಟುಕೊಂಡಿದ್ದರು’ ಎಂದು ಸಾಮಾನ್ಯ ಆಡಳಿತ ವಿಭಾಗದ ನಿರ್ದೇಶಕ ಶಂಕರಪ್ಪ ಸ್ಮರಿಸಿದರು. ಲೆಕ್ಕ ಮತ್ತು ಲೆಕ್ಕಪರಿಶೋಧನಾ ವಿಭಾಗದ ನಿರ್ದೇಶಕ ಸಂತಾನಂ, ಕಾಲೇಜು ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಬಿ.ನಿರಂಜನಮೂರ್ತಿ, ಪ್ರಕಟಣ ವಿಭಾಗದ ನಾ.ಮಹಾವೀರ ಪ್ರಸಾದ್ ಇತರರು ಈ ಸಂದರ್ಭದಲ್ಲಿದ್ದರು.
ಶ್ರದ್ಧಾಂಜಲಿ: ಜನಮನ ವೇದಿಕೆಯಿಂದ ಅನಂತಕುಮಾರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಚಾಮುಂಡಿಪುರಂ ವೃತ್ತದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಬಿಜೆಪಿ ಮುಖಂಡರಾದ ಎಚ್.ವಿ.ರಾಜೀವ್, ಪಾಲಿಕೆ ಸದಸ್ಯ ಮಾ.ವಿ.ರಾಮಪ್ರಸಾದ್, ಸ್ಥಳೀಯ ಮುಖಂಡರಾದ ಪಾರ್ಥಸಾರಥಿ, ಜಯಸಿಂಹ, ಚಂದ್ರಶೇಖರ್ ಇತರರು ಪಾಲ್ಗೊಂಡಿದ್ದರು.

ನುಡಿ ನಮನ: ಚಾಮುಂಡಿಪುರಂನಲ್ಲಿರುವ ಬ್ರಾಹ್ಮಣ ಸಂಘದ ಕಚೇರಿಯಲ್ಲಿ ಅನಂತಕುಮಾರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಂತಾಪ ಸಲ್ಲಿಸಲಾಯಿತು.

ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ರಾಜಕೀಯದಲ್ಲಿ ಮತ್ತು ವಿಪ್ರ ಸಮಾಜದ ಸೇವೆಯಲ್ಲಿ ಸಕ್ರಿಯವಾಗಿದ್ದರು. ಯಾರಲ್ಲೂ ಮನಸ್ತಾಪ ಮಾಡಿಕೊಳ್ಳದೆ ದ್ವೇಷ, ಅಸೂಯೆಯನ್ನು ತೋರದೆ, ಎಲ್ಲರೊಂದಿಗೆ ಸ್ನೇಹಭಾವದಿಂದ ಬಾಳಿದರು. ವಿಪ್ರ ಸಮುದಾಯದ ಅದಮ್ಯ ಚೇತನ, ಬಿಜೆಪಿ ಸಂಘಟಕರಾಗಿದ್ದ ಅವರ ಅಗಲಿಕೆಯಿಂದ ಸಮಾಜಕ್ಕೆ ನಷ್ಟವಾಗಿದೆ ಎಂದರು.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಬಿ.ವಿ.ಮಂಜುನಾಥ್ ಮಾತನಾಡಿ, ನಮ್ಮ ಸಂಘಟನೆಗೆ ಅವರು ಸಹಾಯ, ಸಹಕಾರ ನೀಡಿದ್ದರು. ಈ ಚೇತನವನ್ನು ಕಳೆದುಕೊಂಡು ನಿಜಕ್ಕೂ ನಮ್ಮ ಸಮಾಜ ಬಡವಾಗಿದೆ. ಅವರು ಮುಖ್ಯಮಂತ್ರಿ ಆಗುವ ನಿರೀಕ್ಷೆ ಇತ್ತು ಎಂದರು. ಬಿಜೆಪಿ ಮುಖಂಡ ಗೋಪಾಲರಾವ್ ಮಾತನಾಡಿದರು. ಸಂಘದ ಕೃಷ್ಣದಾಸ ಪುರಾಣಿಕ್, ಡಿ.ಎನ್.ಕೃಷ್ಣಮೂರ್ತಿ ಇತರರಿದ್ದರು.
ತರಗತಿ ನಡೆಸಿ ಶ್ರದ್ಧಾಂಜಲಿ ಸಲ್ಲಿಸಿದ ಅರಿವು : ಮೈಸೂರು: ಕೇಂದ್ರ ಸಚಿವ ಅನಂತಕುಮಾರ್ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸೋಮವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ, ನಗರದ ಲಿಂಗಾಂಬುಧಿಪಾಳ್ಯದಲ್ಲಿರುವ ಅರಿವು ಶಾಲೆಯಲ್ಲಿ ಅನಂತಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಎಂದಿನಂತೆ ತರಗತಿ ನಡೆಸಲಾಯಿತು.

ಸಾಧಕರು ಅಥವಾ ಗಣ್ಯರು ನಿಧನರಾದಾಗ ರಜೆ ನೀಡುವ ಬದಲು ಮೃತರ ಜೀವನ, ಸಾಧನೆ ಮತ್ತು ಕೊಡುಗೆ ಸ್ಮರಿಸುವುದು. ಜತೆಗೆ, ಎಂದಿನಂತೆ ಕರ್ತವ್ಯ ನಿರ್ವಹಿಸುವ ಮೂಲಕ ಅವರಿಗೆ ಗೌರವ ಸಲ್ಲಿಸುವುದು ಅರ್ಥಪೂರ್ಣ ಎಂದು ಭಾವಿಸಿರುವ ಈ ಶಾಲೆಯು ಹಿಂದಿನಿಂದಲೂ ಈ ಸಂಪ್ರದಾಯ ಅನುಸರಿಸಿಕೊಂಡು ಬಂದಿದೆ.

ಅಂತೆಯೇ, ಸೋಮವಾರ ಕೂಡ ಶಾಲೆಯಲ್ಲಿ ಶ್ರದ್ಧಾಂಜಲಿ ಸಭೆ ನಡೆಸಿ ಅಗಲಿದ ನಾಯಕನಿಗೆ ಒಂದು ನಿಮಿಷ ಮೌನಾಚರಣೆ ಮೂಲಕ ಗೌರವ ಸಲ್ಲಿಸಲಾಯಿತು. ಬಳಿಕ ಮಕ್ಕಳು ಎಂದಿನಂತೆ ತರಗತಿಗಳಿಗೆ ತೆರಳಿದರು.

ಅರಿವು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವ್ಯವಸ್ಥಾಪಕ ಟ್ರಸ್ಟಿ ಡಾ.ಎಂ.ಸಿ.ಮನೋಹರ, ಕಾರ್ಯದರ್ಶಿ ಜನಾರ್ದನ, ಮುಖ್ಯಶಿಕ್ಷಕಿ ಎಂ.ಮಂಜುಳಾ ಈ ಸಂದರ್ಭದಲ್ಲಿದ್ದರು.

ಅದಮ್ಯ ಚೇತನ ಟ್ರಸ್ಟ್ ವತಿಯಿಂದ 2017ರಲ್ಲಿ ಬೆಂಗಳೂರಿನಲ್ಲಿ ಏರ್ಪಡಿಸಿದ್ದ ಸಂಸ್ಕೃತಿ ಸುಫಲಾಮ್ ಸೇವಾ ಉತ್ಸವದಲ್ಲಿ ಅರಿವು ಶಾಲೆಯ ಮಕ್ಕಳು ಭಾಗವಹಿಸಿದ್ದರು. ಆ ವೇಳೆ ಶಾಲೆಯ ಮಕ್ಕಳು ಕಾವೇರಿ ನದಿಯುದ್ದಕ್ಕೂ ಪ್ರವಾಸ ಮಾಡಿ ಸಾಕ್ಷ್ಯಚಿತ್ರ ತಯಾರಿಸಿ, ಪ್ರದರ್ಶಿಸಿದ್ದ ಬಗ್ಗೆ ಅನಂತಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಶಾಲಾ ತಂಡದೊಂದಿಗೆ ಛಾಯಾಚಿತ್ರ ತೆಗೆಸಿಕೊಂಡಿದ್ದರು.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...