ಪಕ್ಷ ಬಲವರ್ಧನೆಗೆ ಕಾರ್ಯಕರ್ತರು ಶ್ರಮಿಸಿ

12RAM21-Web
ರಾಮದುರ್ಗದ ಮರಾಠಾ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಪದಾಕಾರಿಗಳ ಸಭೆಯನ್ನುದ್ದೇಶಿಸಿ ಶಾಸಕ ಮಹಾದೇವಪ್ಪ ಯಾದವಾಡ ಮಾತನಾಡಿದರು.ರಮೇಶ ದೇಶಪಾಂಡೆ, ರಾಜೇಶ ಬೀಳಗಿ, ಮಹೇಶ ಮೋಹಿತೆ, ಸುಭಾಸ ಪಾಟೀಲ, ಗಿರೀಶ ಚೌಗಲೆ ಇತರರು ಇದ್ದರು.
Published on

ರಾಮದುರ್ಗ: ರಾಜ್ಯದಲ್ಲಿ ಮುಂಬರುವ ಚುನಾವಣೆಗಾಗಿ ಬಿಜೆಪಿಯನ್ನು ಮತ್ತಷ್ಟು ಬಲಪಡಿಸುವಲ್ಲಿ ಕಾರ್ಯಕರ್ತರು, ಪದಾಕಾರಿಗಳು ಶ್ರಮಿಸಬೇಕು. ಎಲ್ಲ ಜಿಪಂ ಹಾಗೂ ತಾಪಂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಆಯ್ಕೆಯಾಗುವಂತೆ ಕೆಲಸ ನಿರ್ವಹಿಸಿ ಎಂದು ಶಾಸಕ ಮಹಾದೇವಪ್ಪ ಯಾದವಾಡ ಕರೆ ನೀಡಿದರು.

ಪಟ್ಟಣದ ಮರಾಠಾ ಕಲ್ಯಾಣ ಮಂಟಪದಲ್ಲಿ ಬಿಜೆಪಿ ತಾಲೂಕಾ ಘಟಕದಿಂದ ಗುರುವಾರ ಹಮ್ಮಿಕೊಂಡಿದ್ದ ಪಕ್ಷದ ಪದಾಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಡಳಿತವನ್ನು ವಿಶ್ವವೇ ಮೆಚ್ಚಿಕೊಂಡಿದೆ ಎಂದು ಹೇಳಿದರು.

ವಿಶ್ವವೇ ಆರ್ಥಿಕ ಸಂಕಷ್ಟ ಎದುರಿಸುತ್ತಿರುವಾಗ ದೇಶವನ್ನು ಮುನ್ನಡೆಸಿದ ಕೀರ್ತಿಗೆ ಮೋದಿಜೀ ಭಾಜನರಾಗಿದ್ದಾರೆ. ಜನತೆಯ ಕಲ್ಯಾಣಕ್ಕಾಗಿ ಪ್ರಧಾನ ಮಂತ್ರಿಗಳು ಜಾರಿಗೆ ತಂದ ಜನಪರ ಯೋಜನೆಗಳನ್ನು ಜನತೆಗೆ ತಿಳಿಸಬೇಕು ಅಲ್ಲದೆ, ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ರಮೇಶ ದೇಶಪಾಂಡೆ ಮಾತನಾಡಿ, ಬೂತ್‌ಮಟ್ಟದ ಶಕ್ತಿ ಹಾಗೂ ಮಹಾ ಶಕ್ತಿ ಕೇಂದ್ರ ಸೇರಿದಂತೆ ಪ್ರಮುಖರನ್ನು ನೇಮಕ ಮಾಡಿದಲ್ಲಿ ಪಕ್ಷ ಬಲಿಷ್ಠಗೊಳ್ಳುತ್ತದೆ ಎಂದು ಸಲಹೆ ನೀಡಿದರು.

ಬಿಜೆಪಿ ತಾಲೂಕಾಧ್ಯಕ್ಷ ರಾಜೇಶ ಬೀಳಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ ಮೋಹಿತೆ, ಸುಭಾಸ ಪಾಟೀಲ, ಗಿರೀಶ ಚೌಗಲೆ, ಜಿಲ್ಲಾ ಉಪಾಧ್ಯಕ್ಷ ಮಾರುತಿ ಕೊಪ್ಪದ, ಪುರಸಭೆ ಅಧ್ಯಕ್ಷ ಶಂಕರ ಬೆನ್ನೂರ, ಎಪಿಎಂಸಿ ಅಧ್ಯಕ್ಷ ದ್ಯಾವಪ್ಪ ಬೆಳವಡಿ, ಮುಖಂಡ ಡಾ. ಕೆ.ವಿ. ಪಾಟೀಲ, ರೇಖಾ ಚಿನ್ನಾಕಟ್ಟಿ, ನಿಂಗನಗೌಡ ಪಾಟೀಲ, ಉಮೇಶ ಹಕಾಟಿ. ಶಂಕರ ಹುರಕಡ್ಲಿ, ಬಸವರಾಜ ಕೋಣಣ್ಣವರ ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net