More

    ಪಕ್ಷ ಸಂಘಟನೆ ನಿರಂತರವಾಗಿರಲಿ

    ಬೆಳಗಾವಿ: ಕಾಂಗ್ರೆಸ್ ಸರ್ಕಾರದ ಹತ್ತು ತಿಂಗಳ ಆಡಳಿತ ಜನರಿಗೆ ಬೇಡವಾಗಿದ್ದು, ಸದ್ಯ ವಿಧಾನಸಭೆಗೆ ಮರು ಚುನಾವಣೆ ನಡೆದರೂ ಬಿಜೆಪಿ 140ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಹಾಗಾಗಿ, ಪಕ್ಷ ಸಂಘಟನೆ ಕೈಬಿಡಬೇಡಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

    ನಗರದ ಮಹಾವೀರ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾವು ಸೋತಿರಬಹುದು. ಹಾಗಂತ ಎದೆಗುಂದುವ ಅವಶ್ಯಕತೆ ಇಲ್ಲ. ನಮ್ಮ ಸಂಘಟನೆ ಇನ್ನಷ್ಟು ಬಲಿಷ್ಠಗೊಳಿಸಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಗೆಲ್ಲಲು ಸಾಧ್ಯವಾಗಲಿದೆ. ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ವಿಜಯ ಸಾಧಿಸೋಣ ಎಂದರು.

    ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿದೆ ಎಂದು ದೂರಿದರು.

    ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ ಮಾತನಾಡಿ, ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ವ್ಯವಸ್ಥೆಯನ್ನು ಸಂಪೂರ್ಣ ಹಾಳು ಮಾಡಿದೆ. ಆರ್ಥಿಕ ಸ್ಥಿತಿಗತಿ ಕುರಿತು ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಆಗ್ರಹಿಸಿದರು.

    ಶಾಸಕ ವಿಠ್ಠಲ ಹಲಗೇಕರ, ಸಂಸದೆ ಮಂಗಲ ಅಂಗಡಿ, ಮಾಜಿ ಶಾಸಕರಾದ ಅರವಿಂದ ಪಾಟೀಲ, ಸಂಜಯ ಪಾಟೀಲ, ಜಗದೀಶ ಮೆಟಗುಡ, ಸುರೇಶ ಮಾರಿಹಾಳ, ಜಿಲ್ಲಾ ಅಧ್ಯಕ್ಷ ಸುಭಾಷ ಪಾಟೀಲ, ವಿಭಾಗ ಪ್ರಭಾರಿ ಪ್ರಕಾಶ ಅಕ್ಕಲಕೋಟ, ಸಂದೀಪ ದೇಶಪಾಂಡೆ , ರಾಜ್ಯ ಉಪಾಧ್ಯಕ್ಷ ಅನಿಲ ಬೆನಕೆ, ಪ್ರಮೋದ ಕೋಚೇರಿ, ಬಿ.ಎಫ್.ಕೊಳದೂರ, ಮಾರುತಿ ಕೊಪ್ಪದ, ಲಕ್ಷ್ಮಣ ತಪಸಿ, ಧನಶ್ರೀ ದೇಸಾಯಿ, ರತ್ನಾ ಗೋಧಿ, ಮಂಜುಳಾ ಹಿರೇಮಠ, ಯುವರಾಜ ಜಾಧವ, ಜಗದೀಶ ಕೌಜಗೇರಿ, ಡಾ.ಗುರುಪ್ರಸಾದ ಕೋತಿನ, ಗುರುಪಾದ ಕಳ್ಳಿ, ಈರಣ್ಣ ಚಂದರಗಿ, ಸಂಜಯ ಕುಬಲ್, ಡಾ.ಬಸವರಾಜ ಪರವಣ್ಣವರ, ರಾಜೇಂದ್ರ ಗೌಡಪ್ಪಗೋಳ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts