ಗ್ರಾಮಗಳಲ್ಲಿ ಪಕ್ಷ ಸಂಘಟನೆ ಕಾರ್ಯ

protest
ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆಯನ್ನು ವಿರೋಧಿಸಿ ಕಾರ್ಕಳ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.
Published on

ಕಾರ್ಕಳ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಸಭೆ ನಡೆಸುತ್ತಿದೆ. ಅತ್ತ ಕಡೆ ಕೇಂದ್ರ ಸರ್ಕಾರ ಗ್ಯಾಸ್ ಬೆಲೆ ಏರಿಸಿ ರಾಜ್ಯ ಬಿಜೆಪಿಗೆ ಕಪಾಳಮೋಕ್ಷ ನೀಡಿದೆ. ರಾಜ್ಯದಲ್ಲಿ ಬಿಜೆಪಿ ಸೋಲಿಸಿದಂತೆ ಕಾರ್ಕಳದಲ್ಲೂ ಸೋಲಿಸಬೇಕಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಪಕ್ಷ ಕಟ್ಟುವಕಾರ್ಯ ಹಳ್ಳಿಗಳಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಮುಖಂಡ ಉದಯಕುಮಾರ್ ಶೆಟ್ಟಿ ಮುನಿಯಾಲು ಹೇಳಿದರು.

ಕಾರ್ಕಳ ಯುವ ಕಾಂಗ್ರೆಸ್ ಸಮಿತಿ ವತಿಯಿಂದ, ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ವಿರುದ್ಧ ಕಾರ್ಕಳ ಬಸ್ ನಿಲ್ದಾಣ ಬಳಿಯಲ್ಲಿ ಶನಿವಾರ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ ಮಾತನಾಡಿ, ಕೋಮು ಸೌಹಾರ್ದತೆಗೆ ಧಕ್ಕೆತರುವ ರೀತಿ ನಡೆದುಕೊಳ್ಳುವಂತೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಬಿಜೆಪಿಯವರು ಅರ್ಥಶಾಸ್ತ್ರ ಓದಿಲ್ಲ. ಪಂಚ ಗ್ಯಾರಂಟಿಗಳಿಂದ ಜನರಲ್ಲಿ ಆರ್ಥಿಕ ಕ್ರೋಡೀಕರಣವಾಗಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಮಾತನಾಡಿದರು. ಯುವ ಕಾಂಗ್ರೆಸ್ ಅಧ್ಯಕ್ಷ ಸೂರಜ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರತಿಭಟನಾ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಮುಖಂಡರು, ಪುರಸಭೆಯ ಕಾಂಗ್ರೆಸ್ ಸದಸ್ಯರು, ಯುವ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net