More

    ಪಕ್ಷದ ಕಾರ್ಯಕರ್ತರು ತಲೆತಗ್ಗಿಸಿ ಮತ ಕೇಳಬೇಕಿಲ್ಲ: ಸಂಸದ ರಾಘವೇಂದ್ರ

    ಶಿವಮೊಗ್ಗ: ಕಳೆದ ಲೋಕಸಭಾ ಚುನಾವಣೆಯಲ್ಲಿ 2.75 ಲಕ್ಷ ಮತಗಳ ಅಂತರದಿಂದ ಶಿವಮೊಗ್ಗ ಕ್ಷೇತ್ರದಲ್ಲಿ ಗೆಲುವು ಸಾಧ್ಯವಾಗಿತ್ತು. ಗೆಲುವಿನ ಬಳಿಕ ಜಿಲ್ಲೆಯಲ್ಲಿ ಎರಡು ಪಟ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಹಾಗಾಗಿ ಈ ಬಾರಿ ಚುನಾವಣೆಯಲ್ಲಿ ಗೆಲುವಿನ ಅಂತರ ದುಪ್ಪಟ್ಟು ಆಗಬೇಕಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

    ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ಯುವಮೋರ್ಚಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಯಾರೂ ತಲೆತಗ್ಗಿಸಿ ಮತ ಕೇಳಬೇಕಿಲ್ಲ. ಆ ರೀತಿಯಲ್ಲಿ ಕ್ಷೇತ್ರದ ಅಭಿವೃದ್ಧಿ ಮಾಡಲಾಗಿದೆ ಎಂದರು.
    ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅನೇಕ ಯೋಜನೆಗಳ ಕರಪತ್ರ ಜತೆಗಿಟ್ಟುಕೊಂಡು ಚರ್ಚೆ ಮಾಡಿ ಮಹಿಳೆಯರು, ಯುವಕರು, ರೈತರಿಗೆ ಮುಟ್ಟಿಸುವ ಕೆಲಸ ಮಾಡಬೇಕು. ಅದರಲ್ಲೂ ವಿಶೇಷವಾಗಿ ಯುವಮೋರ್ಚಾ ಕಾರ್ಯಕರ್ತರು ಒಂದು ತಂಡವಾಗಿ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.
    ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಗೌರವ ಹೆಚ್ಚಳ ಆಗುವಂತೆ ಮಾಡಿದ್ದಾರೆ. ಕೇಂದ್ರ ಸರ್ಕಾರ ಡಿಜಿಟಲ್ ಆರ್ಥಿಕತೆಗೆ ಒತ್ತು ನೀಡಿದೆ ಎಂದರು.
    ಹಿಂದೆ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಇದ್ದಾಗ ಪ್ರತಿಪಕ್ಷದವರು ಬಾಯಿಗೆ ಬಂದಂತೆ ಆರೋಪ ಮಾಡುತ್ತಿದ್ದರು. ಶೇ.50 ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ ಭರ್ತಿ ಮಾಡುತ್ತಿಲ್ಲವೆಂದು ದೂರುತಿದ್ದರು. ಈಗ ಅವರದ್ದೇ ಸರ್ಕಾರ ಬಂದು 9 ತಿಂಗಳಾಗಿದೆ. ಸರ್ಕಾರಿ ಹುದ್ದೆಗಳು ಸಾಕಷ್ಟು ಖಾಲಿ ಇವೆ. ಸರ್ಕಾರಿ ನೌಕರರಿಗೆ ವೇತನ ನೀಡಲು 1.25 ಲಕ್ಷ ಕೋಟಿ ರೂ. ಬೇಕಾಗುತ್ತದೆ. ಯಾವುದೇ ಸರ್ಕಾರಕ್ಕೂ ಇದು ಕಷ್ಟ. ಹಾಗಾಗಿ ಕೇಂದ್ರ ಸರ್ಕಾರ ಖಾಸಗಿ ಉದ್ಯೋಗ ಸೃಷ್ಟಿಗೆ ಒತ್ತು ನೀಡಿದೆ ಎಂದರು.
    ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ್ ಕುಕ್ಕೆ, ಪ್ರಧಾನ ಕಾರ್ಯದರ್ಶಿಗಳಾದ ದರ್ಶನ್, ಅರುಣ್, ಎಂ.ಬಿ.ಹರಿಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts