

ಚೀನಾ: ಮಂಗಳವಾರ (ಅ.03) ನಡೆದ ಏಷ್ಯನ್ ಗೇಮ್ಸ್ 2023ರ ಮಹಿಳೆಯರ 5000 ಮೀಟರ್ ಓಟದಲ್ಲಿ ಅಥ್ಲೀಟ್ ಪಾರುಲ್ ಚೌಧರಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.
ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023 ರಲ್ಲಿ ನಡೆದ ಮಹಿಳೆಯರ 5000 ಮೀಟರ್ ಓಟದಲ್ಲಿ ಭಾರತದ ಅಥ್ಲೀಟ್ ಪಾರುಲ್ ಚೌಧರಿ ಚಿನ್ನಕ್ಕೆ ಮುತ್ತಿಟ್ಟಿದ್ದು, ಮಹಿಳೆಯರ 3000 ಮೀಟರ್ ಸ್ಟೀಪಲ್‌ಚೇಸ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಒಂದು ದಿನದ ನಂತರ, ಪಾರುಲ್ 15:14.75 ಸಮಯ ದಾಖಲಿಸುವ ಮುಖೇನ ಗೋಲ್ಡ್ ಮೆಡಲ್ ಪಡೆದುಕೊಂಡಿದ್ದಾರೆ. ಇದು ಕ್ರೀಡಾಕೂಟದಲ್ಲಿ ಭಾರತಕ್ಕೆ 14ನೇ ಚಿನ್ನವಾಗಿದೆ,(ಏಜೆನ್ಸೀಸ್).