More

    ಸಡಗರದ ಪಾರ್ವತಾಂಬ ರಥೋತ್ಸವ

    ಗುಂಡ್ಲುಪೇಟೆ: ತಾಲೂಕಿನ ಹಸಗೂಲಿ ಗ್ರಾಮದಲ್ಲಿ ಮಂಗಳವಾರ ಕಸಕಲಪುರ ಶ್ರೀ ಪಾರ್ವತಾಂಬ ರಥೋತ್ಸವ ಮಂಗಳವಾರ ಲಕ್ಷಾಂತರ ಭಕ್ತರ ನಡುವೆ ಶ್ರದ್ಧಾಭಕ್ತಿಯಿಂದ ನೆರವೇರಿತು.

    ಸೋಮವಾರದಿಂದ ಆರಂಭವಾದ ಮೂರು ದಿನಗಳ ಜಾತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ ಅಮ್ಮನವರ ಉತ್ಸವ ಮೂರ್ತಿಯನ್ನು ಹೂವುಗಳಿಂದ ಅಲಂಕರಿಸಿದ್ದ ರಥದಲ್ಲಿ ಪ್ರತಿಷ್ಠಾಪಿಸಿ ರಾತ್ರಿಯವರೆಗೂ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ತಮ್ಮ ಹರಕೆಗಳನ್ನು ತೀರಿಸಿದರು. ಬಾಯಿಬೀಗ, ಹಣ್ಣು ಕಜ್ಜಾಯ ಎಸೆದು ತಮ್ಮ ಕಷ್ಟಗಳನ್ನು ಪರಿಹರಿಸುವಂತೆ ಪ್ರಾರ್ಥಿಸಿದರು.

    ಜಾನುವಾರುಗಳ ಜಾತ್ರೆಗೆ ನಂಜನಗೂಡು, ಎಚ್.ಡಿ.ಕೋಟೆ ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳಿಂದಲೂ ಸಾವಿರಾರು ಜನರು ಜಾನುವಾರುಗಳೊಂದಿಗೆ ಆಗಮಿಸಿದ್ದರು. ಜಾನುವಾರುಗಳಿಗೆ ಅನಾರೋಗ್ಯ ಕಂಡುಬಂದಲ್ಲಿ ಇಲ್ಲಿನ ದೇವಿಗೆ ಹರಕೆ ಹೊತ್ತುಕೊಂಡರೆ ಗುಣವಾಗುತ್ತದೆ ಎಂಬ ನಂಬಿಕೆ ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಇದೆ. ಈ ಹಿನ್ನೆಲೆಯಲ್ಲಿ ಹರಕೆಹೊತ್ತವರು ಜಾತ್ರೆ ಹಿಂದಿನ ದಿನವೇ ತಮ್ಮ ಎತ್ತುಗಳು ಹಾಗೂ ಗಾಡಿಗಳನ್ನು ಅಲಂಕರಿಸಿ ಕೇಸರಿ ಪತಾಕೆ ಕಟ್ಟಿ ಗ್ರಾಮಕ್ಕೆ ಆಗಮಿಸಿದ್ದರು. ಬೆಳಗ್ಗಿನ ಜಾವ ಕೊಂಬುಗಳಿಗೆ ಪಂಜು ಕಟ್ಟಿ ದೇವಾಲಯದ ಸುತ್ತಲೂ ಪ್ರದಕ್ಷಿಣೆ ಮಾಡಿಸಿ ಹರಕೆ ತೀರಿಸಿದರು.
    ಬಿಗಿ ಬಂದೋಬಸ್ತ್: ಯಾವುದೇ ಅಹಿತಕರ ಘಟನೆ ನಡೆಯದಂತೆ ಬೇಗೂರು ಠಾಣೆ ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದ್ದರು. ಎಸ್‌ಪಿ, ಡಿವೈಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಇಂದು ಸಂಪನ್ನ: ಬುಧವಾರ ಮಧ್ಯಾಹ್ನ ಗ್ರಾಮದಲ್ಲಿ ರಥ ಸಾಗಿದ ಮಾರ್ಗದಲ್ಲಿಯೇ ವಾಪಸಾಗುವ ಮೂಲಕ ಜಾತ್ರೆ ಸಂಪನ್ನಗೊಳ್ಳಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts