More

    ಪಾರ್ವತಾಂಬೆ ರಥೋತ್ಸವ ಸಂಪನ್ನ

    ಗುಂಡ್ಲುಪೇಟೆ: ತಾಲೂಕಿನ ಕಂದೇಗಾಲ ಸಮೀಪದ ಸ್ಕಂದಗಿರಿ ಸೋಮೇಶ್ವರಸ್ವಾಮಿ ಪಾರ್ವತಾಂಬೆ ರಥೋತ್ಸವ ಗುರುವಾರ ಸಾವಿರಾರು ಭಕ್ತರ ಜಯಘೋಷದ ನಡುವೆ ವಿಜೃಂಭಣೆಯಿಂದ ಸಂಪನ್ನಗೊಂಡಿತು.


    ವೈಖಾಖ ಶುದ್ಧ ಪೂರ್ಣಿಮೆಯ ದಿನ ಸೋಮೇಶ್ವರ ಪಾರ್ವತಿ ಸಹಿತ ರಥೋರೋಹಣ ಮಾಡಿದ ಹಿನ್ನೆಲೆಯಲ್ಲಿ ಪ್ರತಿವರ್ಷವು ಮೇ ತಿಂಗಳು ಬುದ್ಧ ಪೂರ್ಣಿಮೆಯ ದಿನ ಪಾರ್ವತಿ ಮತ್ತು ಸೋಮೇಶ್ವರ ಸ್ವಾಮಿಯ ರಥೋತ್ಸವ ನಡೆಯುತ್ತಾ ಬಂದಿದೆ. ಕಳೆದ ಹತ್ತು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಇಂದು ಬಿಡುವು ಕೊಟ್ಟಿದ್ದರಿಂದ ರಥೋತ್ಸವ ಸಾಂಗವಾಗಿ ನೆರವೇರಿತು.
    ಗುರುವಾರ ಬೆಳಗ್ಗೆ ವಿಶೇಷ ಪೂಜೆಯ ನಂತರ ಉತ್ಸವ ಮೂರ್ತಿಗಳನ್ನು ಮೆರವಣಿಗೆ ಮೂಲಕ ತಂದು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಮಧ್ಯಾಹ್ನ 12 ಗಂಟೆಗೆ ಮುಜರಾಯಿ ಅಧಿಕಾರಿಗಳು ರಥಕ್ಕೆ ಪೂಜೆ ಸಲ್ಲಿಸಿದ ನಂತರ ಭಕ್ತರು ರಥವನ್ನು ಎಳೆಯಲಾರಂಭಿಸಿದರು. ಬೆಟ್ಟದ ತಪ್ಪಲಿನಲ್ಲಿ ಒಂದು ಸುತ್ತು ಹಾಕಿದ ರಥ ಸುರಕ್ಷಿತವಾಗಿ ಸ್ವಸ್ಥಾನ ತಲುಪಿತು. ನಂತರ ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಯಿತು. ಕಂದೇಗಾಲ ಸುತ್ತಮುತ್ತಲಿನ ಹತ್ತಾರು ಗ್ರಾಮಗಳ ಜನರು ಜಾತ್ರೆಯ ಉಸ್ತುವಾರಿ ವಹಿಸಿಕೊಂಡಿದ್ದರು.

    ಎರಡು ವರ್ಷಗಳ ಹಿಂದೆ ಇಬ್ಬರು ಭಕ್ತರು ರಥದ ಚಕ್ರಕ್ಕೆ ಸಿಲುಕಿ ಒಬ್ಬರು ಸಾವಿಗೀಡಾದ ಹಿನ್ನೆಲೆಯಲ್ಲಿ ಈ ಬಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೂ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ರಥೋತ್ಸವ ಭಾಗವಹಿಸಿದ್ದರು.

    .

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts