ಪಾರ್ವತಮ್ಮ ರಾಜ್​ಕುಮಾರ್​ ತಮ್ಮನ ಮಗನಿಗೆ ಅಪಘಾತ; ಬಲಗಾಲು ಕಳೆದುಕೊಂಡ ಯುವ ನಟ ಸೂರಜ್​

Parvathamma Rajkumar relative and Kannada actor Suraj met with accident
Published on

ಗುಂಡ್ಲುಪೇಟೆ: ಪಾರ್ವತಮ್ಮ ರಾಜ್​ಕುಮಾರ್​ ತಮ್ಮನ ಮಗ ನಟ ಸೂರಜ್​ಗೆ ಭೀಕರವಾದ ಅಪಘಾತದಲ್ಲಿ ​ಕಾಲಿಗೆ ತೀವ್ರವಾಗಿ ಪೆಟ್ಟಾಗಿದೆ. ಈ ಪರಿಣಾಮವಾಗಿ ಕಾಲು ಕತ್ತರಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೈಸೂರಿನ ಸರಸ್ವತಿಪುರಂ ನಿವಾಸಿ ಧೀರಜ್ (28) ತೀವ್ರವಾಗಿ ಗಾಯಗೊಂಡಿದ್ದಾರೆ. ಶನಿವಾರ (ಜೂನ್​ 24) ಸಂಜೆ ನಾಲ್ಕು ಗಂಟೆ ಸುಮಾರಿಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸೂರಜ್​ ಅವರು ಬೈಕ್​ನಲ್ಲಿ ಊಟಿಗೆ ತೆರಳುತ್ತಿದ್ದರು. ಬೇಗೂರಿನಿಂದ ಹಿರಿಕಾಟಿ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿಯೊಂದು ಮೈಸೂರು ಕಡೆಯಿಂದ ಬರುತ್ತಿದ್ದ ಬುಲೆಟ್ ಬೈಕ್​​ಗೆ ಡಿಕ್ಕಿ ಸಂಭವಿಸಿದೆ.  ಈ ವೇಳೆ ಅವರ ಕಾಲಿನ ಮೇಲೆ ಟಿಪ್ಪರ್​ ಹರಿದಿದೆ. ಅವರ ಬಲಗಾಲು ಸಂಪೂರ್ಣ ನಜ್ಜುಗುಜ್ಜಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಕಾಲಿಗೆ ತೀವ್ರ ಪೆಟ್ಟಾಗಿದ್ದರಿಂದ ಬಲಗಾಲು ಕತ್ತರಿಸಲಾಗಿದೆ ಎನ್ನಲಾಗಿದೆ.

ವಿಷಯ ತಿಳಿದ ಬೇಗೂರು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಗಾಯಾಳವನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಶಿವರಾಜ್​​ಕುಮಾರ್​​ ಹಾಗೂ ಕುಟುಂಬಸ್ಥರು ಮೈಸೂರಿನ ಆಸ್ಪತ್ರೆಯತ್ತ ತೆರಳಿದ್ದಾರೆ.

ಪಾರ್ವತಮ್ಮ ಸಹೋದರ ಮೀಸೆ ಶ್ರೀನಿವಾಸ್ ಪುತ್ರ ಸೂರಜ್, ‘ಭಗವಾನ್​ ಶ್ರೀಕೃಷ್ಣ ಪರಮಾತ್ಮ’ ಸಿನಿಮಾದಲ್ಲಿ ನಟಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net