More

    ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ದೊಡ್ಡ ಹೊಡೆತ, ಬಿಜೆಪಿ ಸೇರಿದ ಹಿರಿಯ ನಾಯಕಿ

    ರಾಂಚಿ: ಜಾರ್ಖಂಡ್‌ನಲ್ಲಿ ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ಭಾರೀ ಹಿನ್ನಡೆಯಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿ ಮಧು ಕೋಡ ಅವರ ಪತ್ನಿ ಹಾಗೂ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಸಂಸದೆ ಗೀತಾ ಕೋಡ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ, ಇದೀಗ ಬಿಜೆಪಿ ಸೇರಿದ್ದಾರೆ. ಜಾರ್ಖಂಡ್ ಬಿಜೆಪಿ ರಾಜ್ಯಾಧ್ಯಕ್ಷ ಬಾಬುಲಾಲ್ ಮರಾಂಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡರು. ಮೂಲಗಳ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮಾಡಿಕೊಂಡಿರುವ ಮೈತ್ರಿ ಅವರಿಗೆ ತೃಪ್ತಿ ತಂದಿಲ್ಲ.

    ಆದರೆ, ಗೀತಾ ಕೋಡ ಬಿಜೆಪಿ ಸೇರುವ ಕುರಿತು ಚರ್ಚೆಗಳು ನಡೆದಿದ್ದು ಇದೇ ಮೊದಲಲ್ಲ. ಕಳೆದ ಜನವರಿ 17ರಂದು ಬಿಜೆಪಿ ಸೇರುವ ಸುದ್ದಿ ಬಹಿರಂಗವಾಗಿತ್ತು. ರಾಜ್ಯಾಧ್ಯಕ್ಷ ಬಾಬುಲಾಲ್ ಮರಾಂಡಿ ಅವರೊಂದಿಗೆ ಮಾತುಕತೆ ನಡೆಸಿ, ಆ ನಂತರ ಕೇಂದ್ರ ನಾಯಕರ ಒಪ್ಪಿಗೆಯನ್ನೂ ಪಡೆದಿದ್ದಾರೆ ಎಂಬ ಮಾಹಿತಿಯೂ ಕೇಳಿಬಂದಿದೆ.

    ಗೀತಾ ಕೋಡ ಅವರ ಪತಿ ಹಾಗೂ ಮಾಜಿ ಮುಖ್ಯಮಂತ್ರಿ ಮಧು ಕೋಡ ಕೂಡ ಈ ಹಿಂದೆ ಬಿಜೆಪಿಯಲ್ಲಿದ್ದರು ಎಂಬುದು ಗಮನಾರ್ಹ. ಮಧು ಕೋಡ 2000 ರಲ್ಲಿ ಬಿಜೆಪಿ ಟಿಕೆಟ್‌ ಪಡೆದು ಜಗನ್ನಾಥಪುರದಿಂದ ಶಾಸಕರಾದರು. ಇಬ್ಬರೂ ಹಳೆಯ ಬಿಜೆಪಿ ಕಾರ್ಯಕರ್ತರೊಂದಿಗೆ ಸಂಬಂಧ ಹೊಂದಿದ್ದಾರೆ.

    ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಸಂದರ್ಭದಲ್ಲಿ ಮಧು ಕೋಡ ಅವರು ಈ ಕ್ರಮ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಾನು ಇಂದು ಬಿಜೆಪಿ ಸೇರಿದ್ದೇನೆ. ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುವ ಮೂಲಕ ದೇಶವನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಎಂದರು. 

    ಸಿಎಂ-ಡಿಸಿಎಂ ಮಧ್ಯೆ ಏನು ನಡೀತಿದೆ ಅನ್ನೋದು ಚುನಾವಣೆ ಬಳಿಕ ಹೊರಬರಲಿದೆ: ಶೋಭಾ ಕರಂದ್ಲಾಜೆ

    ಹಾವಿನ ವಿಷ ಅಮಲು ಮಾತ್ರವಲ್ಲ, ಜೀವರಕ್ಷಕವೂ ಹೌದು…ಲಕ್ಷಾಂತರ ಜನರ ಪ್ರಾಣ ಉಳಿಸುವ ಈ ವಿಷಕಾರಿ ಹಾವುಗಳ ಬಗ್ಗೆ ನಿಮಗೆ ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts