72 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ಪತನ: ನೇಪಾಳದಲ್ಲಿ ಮಡುಗಟ್ಟಿದ ಆತಂಕ

's Pokhara Airport
Published on

ಕಠ್ಮಂಡು: 72 ಮಂದಿ ಪ್ರಯಾಣಿಸುತ್ತಿದ್ದ ವಿಮಾನವೊಂದು ನೇಪಾಳದ ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್​ ವೇ ಬಳಿಯೇ ಪತನಗೊಂಡಿದ್ದು, ಹೊತ್ತಿ ಉರಿದ ದುರ್ಘಟನೆ ಇಂದು(ಭಾನುವಾರ) ಬೆಳಗ್ಗೆ ಸಂಭವಿಸಿದೆ.

ವಿಮಾನವು ಕಠ್ಮಂಡುವಿನಿಂದ ಪೋಖರಾಗೆ ಹೋಗುತ್ತಿದ್ದ ಯೇತಿ ಏರ್‌ಲೈನ್ಸ್ ಎಟಿಆರ್​-72 ವಿಮಾನವು ಹಳೆಯ ವಿಮಾನ ನಿಲ್ದಾಣ ಮತ್ತು ಪೋಖರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಡುವೆ ಕಸ್ಕಿ ಜಿಲ್ಲೆಯ ಪೋಖರಾದಲ್ಲಿ ಪತನಗೊಂಡಿದೆ. ಈ ವಿಮಾನದಲ್ಲಿ 68 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು. ವಿಮಾನವು ಹೊತ್ತಿ ಉರಿದಿದ್ದು, 13 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net