

ಬೈಂದೂರು: ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ಭಾನುವಾರ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಚರಂಡಿಗೆ ಉರುಳಿದೆ. ಬಸ್‌ನೊಳಗೆ ಪ್ರಯಾಣಿಸುತ್ತಿದ್ದ ಕೊಲ್ಲೂರು ಪ್ರೌಢಶಾಲೆಯ 7 ಹಾಗೂ ಜೂನಿಯರ್ ಕಾಲೇಜಿನ 10 ವಿದ್ಯಾರ್ಥಿಗಳ ಸಹಿತ ಪ್ರಯಾಣಿಕರಿಗೆ ಗಾಯಗಳಾಗಿವೆ. ಇವರೆಲ್ಲರಿಗೂ ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಿವಮೊಗ್ಗದಿಂದ ಕೊಲ್ಲೂರಿನತ್ತ ಬಸ್ ಸಂಚರಿಸುತ್ತಿದ್ದು, ಶಾಲೆಗೆ ರಜೆ ಇದ್ದದ್ದರಿಂದ ಮಕ್ಕಳೆಲ್ಲರೂ ಊರಿಗೆ ತೆರಳಿ ಹಿಂದಿರುಗುತ್ತಿದ್ದರು. ಸೋಮವಾರ ಬೆಳಗ್ಗೆ ಮಳೆ ಹೆಚ್ಚಿದ್ದರಿಂದ ಘಾಟಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಬಸ್ಸಿನ ಮುಂಭಾಗ ಜಖಂಗೊಂಡಿದೆ