ನೇಪಾಳದಲ್ಲಿ ವಿಮಾನ ಪತನ: 16 ಮಂದಿ ದುರ್ಮರಣ, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ

aircraft crashes nepal pokharaairport
Published on

ಕಠ್ಮಂಡು: ನೇಪಾಳದ ಪೋಖರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಯೇತಿ ಏರ್‌ಲೈನ್ಸ್ ಎಟಿಆರ್​-72 ವಿಮಾನ ಪತನಗೊಂಡ ದುರ್ಘಟನೆಯಲ್ಲಿ 16 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಮತ್ತಷ್ಟು ಸಾವಿನ ಸಂಖ್ಯೆ ಹೆಚ್ಚಾಗಲಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಅಪಘಾತಕ್ಕೀಡಾದ ವಿಮಾನದಲ್ಲಿ 68 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು. ವಿಮಾನವು ಸಂಪೂರ್ಣ ಹೊತ್ತಿ ಉರಿಯುತ್ತಿದ್ದು, ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆ ಬಿರುಸಿನಿಂದ ಸಾಗುತ್ತಿದೆ. ಕೆಲವರನ್ನ ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಇನ್ನೂ ಹಲವರ ರಕ್ಷಣೆ ಕಾರ್ಯ ನಡೆಯುತ್ತಿದೆ. ಈಗಾಗಲೇ 16 ಮಂದಿಯ ಮೃತದೇಹಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.

72 ಆಸನಗಳ ಪ್ರಯಾಣಿಕ ವಿಮಾನವು ಭಾನುವಾರ ಬೆಳಗ್ಗೆ ಪೋಖರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇ ಬಳಿ ಪತನಗೊಂಡಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸದ್ಯಕ್ಕೆ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net