

ಚಿಕಾಗೊ: ವಿಮಾನ ನಿಲ್ದಾಣದ ಬ್ಯಾಗೇಜ್ ಕೌಂಟರ್ ಬಳಿ ನೋಡ ನೋಡುತ್ತಿದ್ದಂತೆ ಪ್ರಯಾಣಿಕರ ಹೊಡೆದಾಡಿಕೊಂಡಿರುವ ಘಟನೆ ಚಿಕಾಗೋದ ಓ ಹರೆ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಘಟನೆಯವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಕಂಡು ಬಂದಿರುವ ಹಾಗೆ ಪ್ರಯಾಣಿಕರು ಒಬ್ಬರನ್ನೊಬ್ಬರು ಕಪಾಳಮೋಕ್ಷ ಮಾಡುತ್ತಿರುವುದು, ಕೂದಲನ್ನು ಎಳದುಕೊಂಡು ಬಡಿದಾಡುತ್ತಿರುವುದು ಕಂಡು ಬರುತ್ತದೆ.
ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ಘಟನೆ ನಡೆದಿದ್ದು ಬ್ಯಾಗೇಜ್ ಕೌಂಟರ್ ಬಳಿ ಪ್ರಯಾಣಿಕರು ಹೊಡೆದಾಡಿಕೊಂಡಿದ್ದಾರೆ. ಆದರೆ, ಜಗಳಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದು ಪೊಲೀಸರ ನಡೆಯನ್ನು ಖಂಡಿಸಿದ್ದಾರೆ.