ಪಟಲಾಂ, ಷಟ್ಕ ನಾಯಕರ ತರಬೇತಿ ಶಿಬಿರ

tarabethi
ಶಿರ್ವ ವಿದ್ಯಾವರ್ಧಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಾಪು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ಸ್ಥಳೀಯ ಸಂಸ್ಥೆಯ ಪಟಲಾಂ ಮತ್ತು ಷಟ್ಕ ನಾಯಕರ ತರಬೇತಿ ಶಿಬಿರ ಜರುಗಿತು.
Published on

ಶಿರ್ವ: ಕಾಪು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ಸ್ಥಳೀಯ ಸಂಸ್ಥೆಯ ಪಟಲಾಂ ಮತ್ತು ಷಟ್ಕ ನಾಯಕರ ತರಬೇತಿ ಶಿಬಿರ ಶಿರ್ವದ ವಿದ್ಯಾವರ್ಧಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿತು.

ವಿದ್ಯಾವರ್ಧಕ ಆಂಗ್ಲ ಮಾಧ್ಯಮ ಶಾಲೆ ಸಂಚಾಲಕ ಮಟ್ಟಾರ್ ರತ್ನಾಕರ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಜಯಕರ್ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಆಯುಕ್ತ ಅಲ್ಬನ್ ರೊಡ್ರಿಗಸ್, ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ.ವೈ.ಭಾಸ್ಕರ ಶೆಟ್ಟಿ, ಶಿರ್ವ ಗ್ರಾಪಂ ಅಧ್ಯಕ್ಷೆ ಸವಿತಾ ರಾಜೇಶ್, ಕಾಪು ಸ್ಥಳೀಯ ಸಂಸ್ಥೆ ಅಧ್ಯಕ್ಷೆ ಡಾ.ಗೀತಾ ಶಶಿಧರ್, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್, ವಿದ್ಯಾವರ್ಧಕ ಆಂಗ್ಲ ಮಾಧ್ಯಮ ಶಾಲೆ ಪ್ರಾಂಶುಪಾಲೆ ಡಾ.ಸಹನಾ ಹೆಗ್ಡೆ, ಶಿಬಿರ ನಾಯಕಿ ನಿಮಿತಾ ಶೆಟ್ಟಿ ಉಪಸ್ಥಿತರಿದ್ದರು.

ಕಾಪು ವಲಯದ 9 ಶಿಕ್ಷಣ ಸಂಸ್ಥೆಗಳ 260 ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿ-ವಿದ್ಯಾರ್ಥಿನಿಯರು ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದರು. ಸ್ಕೌಟ್ಸ್ ಮಾಸ್ಟರ್ ಉಮೇಶ್ ಕಾಂಚನ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾಪು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಮರಿಯ ಅನಿತಾ ಮೆಂಡೊನ್ಸಾ ಸ್ವಾಗತಿಸಿದರು. ಗೈಡ್ ಶಿಕ್ಷಕಿ ರೀಖಾ ಫರ್ನಾಂಡಿಸ್ ವಂದಿಸಿದರು. ಸ್ಕೌಟ್ಸ್ ನಾಯಕಿ ಅಮಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net