ಕರಾವಳಿ ಜನರ ಜೀವನಾಡಿ ಪಚ್ಚಿಲೆ ಕೃಷಿ

pacchile
ಪಚ್ಚಿಲೆ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿದರು.
Published on

ಕೋಟ: ಕರಾವಳಿ ಭಾಗದ ಜೀವನಾಡಿಯಾಗಿ ಪಚ್ಚಿಲೆ ಸೇರಿದಂತೆ ಇನ್ನಿತರ ಮೀನುಗಾರಿಕಾ ಕೃಷಿ ವಿಶೇಷವಾಗಿ ಗಮನ ಸೆಳೆಯುತ್ತಿದೆ. ಇದು ಆಶಾದಾಯಕ ಬೆಳವಣಿಗೆ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ನುಡಿದರು.

ಕೋಡಿ ಕನ್ಯಾಣದಲ್ಲಿ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ, ಜಲಾನಯನ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲಾ ಪಂಚಾಯಿತಿ, ಕೃಷಿ, ಮೀನುಗಾರಿಕೆ ಇಲಾಖೆ, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರ, ಅರಬ್ಬಿ ಸಮುದ್ರ ಮೀನುಗಾರಿಕೆ ನಿರ್ವಹಣೆ ಸಮನ್ವಯ ಸಮಿತಿ, ಸ್ಕೋಡ್ ವೆಸ್ ಸಂಸ್ಥೆ, ಆಯುಶ್ಮಾನ್ ಭವ ಸಂಸ್ಥೆ, ಉಡುಪಿ ಕಿನಾರ ಮೀನುಗಾರರ ಉತ್ಪಾದಕ ಕಂಪನಿ ಮತ್ತು ಅಮೃತೇಶ್ವರಿ ರೈತ ಉತ್ಪಾದಕ ಕಂಪನಿ ನಿಯಮಿತ ಜಂಟಿಯಾಗಿ ಶುಕ್ರವಾರ ಆಯೋಜಿಸಿದ್ದ ಪಚ್ಚಿಲೆ ಕ್ಷೇತ್ರೋತ್ಸವ-2025 ಕಾರ್ಯಕ್ರಮದಲ್ಲಿ ಮಾತನಾಡಿದರು.

ಉಡುಪಿ ಕೃಷಿ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ್ ಕಾರ್ಯಕ್ರಮ ಉದ್ಘಾಟಿಸಿದರು. ಕೃಷಿ ಸೇರಿದಂತೆ ಮೀನುಗಾರಿಕಾ ಕ್ಷೇತ್ರದಲ್ಲಿ ಸಾಧನೆಗೈದ ಗಣಪ ಪೂಜಾರಿ, ಶಾರದಾ ಕೃಷ್ಣ ಖಾರ್ವಿ, ಗೀತಾ ಶ್ರೀನಿವಾಸ ಖಾರ್ವಿ, ಸುಶ್ಮಿತಾ ಅವರಿಗೆ ಕೃಷಿ ಸಾಧಕ ಪುರಸ್ಕಾರ ನೀಡಿ ಗೌರವಿಸಲಾಯಿತು.

ವಿವಿಧ ಇಲಾಖೆಗಳ ಅಧಿಕಾರಿಗಳಾದ ರವಿ, ಸಚಿನ್, ಹಿರಿಯ ವಿಜ್ಞಾನಿ ಶ್ರೀಕಾಂತ್ ಜಿ.ಬಿ., ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ಸದಾನಂದ ಆಚಾರ್ಯ ಬಿ., ಮಣೂರು ಪ್ರಾಥಮಿಕ ಮೀನುಗಾರ ಸಂಘ ನಿರ್ದೇಶಕ ರವೀಂದ್ರ ತಿಂಗಳಾಯ, ಆಪ್ತ ಸಾಕ್ಷರತಾ ಸಮಾಲೋಚಕ ಕೇಂದ್ರ ಉಡುಪಿ ಇದರ ಅರ್ಪಿತಾ, ಅಮೃತೇಶ್ವರಿ ರೈತ ಉತ್ಪಾದಕ ಕಂಪನಿ ಅಧ್ಯಕ್ಷೆ ಬೇಬಿ ಮೆಂಡನ್, ಉಡುಪಿ ಕಿನಾರ ಮೀನುಗಾರ ಉತ್ಪಾದಕ ಕಂಪನಿ ನಿರ್ದೇಶಕ ಸುದಿನಾ ಕೋಡಿ ಉಪಸ್ಥಿತರಿದ್ದರು. ಗಂಗಾಧರ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net