

ವಿಜಯವಾಣಿ ಸುದ್ದಿಜಾಲ ಬದಿಯಡ್ಕ
ಕ್ಷೇತ್ರಗಳ ಜೀರ್ಣೋದ್ಧಾರ ಮುಂತಾದ ದೈವಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಲು ದೈವ ನಿಶ್ಚಯ ಇದ್ದರೆ ಮಾತ್ರ ಸಾಧ್ಯ. ಭಗವಂತನ ಕೃಪೆ ಇದ್ದರೆ ಇಂತಹ ಕಾರ್ಯಕ್ರಮಗಳಲ್ಲಿ ಕೈಜೋಡಿಸಲು ಸಾಧ್ಯವಾಗುತ್ತದೆ ಎಂದು ಕುಂಬ್ಡಾಜೆ ಗ್ರಾಮದ ಪಾತೇರಿ ಶ್ರೀ ಶಂಕರನಾರಾಯಣ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಸಂತ ಪೈ ಹೇಳಿದರು.
ಪಾತೇರಿ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಭಾನುವಾರ ಕ್ಷೇತ್ರದಲ್ಲಿ ಮುಂದೆ ನಡೆಯಬೇಕಾದ ಜೀರ್ಣೋದ್ಧಾರ ಕಾರ್ಯಗಳ ಮಾಹಿತಿ, ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.
ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಸಂಜೀವ ಶೆಟ್ಟಿ ಮೊಟ್ಟೆಕುಂಜ, ಮಲ್ಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆನುವಂಶಿಕ ಮೊಕ್ತೇಸರ ಸತ್ಯನಾರಾಯಣ ಭಟ್ ಆನೆಮಜಲು ಮಾತನಾಡಿದರು.
ಪ್ರಮುಖರಾದ ಗಣೇಶ್ ಕೃಷ್ಣ ಅಳಕ್ಕೆ, ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಶಂಕರನಾರಾಯಣ ಮಯ್ಯ, ಕ್ಷೇತ್ರದ ಆನುವಂಶಿಕ ಮೊಕ್ತೇಸರ ಶ್ರೀನಿವಾಸ ಅಮ್ಮಣ್ಣಾಯ ಪಾವೂರು, ಅರ್ಚಕ ಶಿವಶಂಕರ ಭಟ್ ಪಾತೇರಿ, ಮಾತೃ ಮಂಡಳಿ ಅಧ್ಯಕ್ಷೆ ವಸಂತಿ ಕೇಕೆಮೂಲೆ, ರವಿಶಂಕರ ಉಪ್ಪಂಗಳ ಪುತ್ತೂರು, ಸಮಿತಿ ಕಾರ್ಯಾಧ್ಯಕ್ಷ ಸತ್ಯಮೂರ್ತಿ ಅಮ್ಮಣ್ಣಾಯ ಪಾವೂರು ಮತ್ತಿತರರು ಉಪಸ್ಥಿತರಿದ್ದರು.
ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಹರಿನಾರಾಯಣ ಶಿರಂತಡ್ಕ ಪ್ರಾಸ್ತಾವಿಕ ಮಾತನಾಡಿದರು. ನಾರಾಯಣ ಗೋಸಾಡ ಸ್ವಾಗತಿಸಿದರು. ಗಂಗಾಧರ ಮವ್ವಾರು ವಂದಿಸಿದರು. ಚೈತನ್ಯ ಲಕ್ಷ್ಮೀ ಪಾತೇರಿ ಪ್ರಾರ್ಥನೆ ಹಾಡಿದರು. ರಮೇಶ್ ಶರ್ಮ ಕುರುಮುಜ್ಜಿ ಕಾರ್ಯಕ್ರಮ ನಿರೂಪಿಸಿದರು.