

ಮೂಲ್ಕಿ: ಪಟ್ಲ ಫೌಂಡೇಷನ್ ಕಿನ್ನಿಗೋಳಿ ಘಟಕದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬುಧವಾರ ನಡೆಯಿತು.
ಶ್ರೀ ಕ್ಷೇತ್ರದಲ್ಲಿ ಗೋಪಾಲಕೃಷ್ಣ ಉಪಾಧ್ಯಾಯ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಜಾಗತಿಕ ಬಂಟರ ಸಂಘದ ಒಕ್ಕೂಟ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
ಪಟ್ಲ ಫೌಂಡೇಷನ್ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ, ಯಕ್ಷದ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ನ ಕಿನ್ನಿಗೋಳಿ ಘಟಕ ಮೇ 9ರಂದು ಉದ್ಘಾಟನೆಗೊಳ್ಳಲಿದ್ದು, ಸಾಧಕ ಕಲಾವಿದರಿಗೆ ಗೌರವಾರ್ಪಣೆ, ಅಶಕ್ತರಿಗೆ ವೈದ್ಯಕೀಯ ನೆರವು ಹಸ್ತಾಂತರ, ಸಾಧಕ ಸಮಾಜ ಸೇವಕರ ಸನ್ಮಾನ, ಯಕ್ಷಗಾನ ಗಾನ ವೈಭವ, ಯಕ್ಷಗಾನ ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ. ಕಲಾಭಿಮಾನಿಗಳ ಪ್ರೋತ್ಸಾಹ ನಿರಂತರವಾಗಿರಲಿ ಎಂದರು.
ಕಿನ್ನಿಗೋಳಿ ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ, ಯಕ್ಷದ್ರುವ ಪಟ್ಲ ಫೌಂಡೇಷನ್ ಕಿನ್ನಿಗೋಳಿ ಘಟಕದ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಕೋಶಾಧಿಕಾರಿ ಸ್ವರಾಜ್ ಶೆಟ್ಟಿ ಮುಂಡ್ಕೂರು ದೊಡ್ಡಮನೆ, ಸಂಚಾಲಕ ಪೃಥ್ವಿರಾಜ ಆಚಾರ್ಯ ಕಿನ್ನಿಗೋಳಿ, ಪುಷ್ಪರಾಜ ಚೌಟ, ಪ್ರಧಾನ ಕಾರ್ಯದರ್ಶಿ ದಿವಾಕರ ಕರ್ಕೇರ, ಮಾಧ್ಯಮ ಪ್ರಚಾರಕರಾದ ಶರತ್ ಶೆಟ್ಟಿ, ನಿಶಾಂತ್ ಶೆಟ್ಟಿ ಕಿಲೆಂಜೂರು, ದೇವಿಪ್ರಸಾದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.