ಪತ್ರಿಕಾ ವಿತರಕರ ವಯಸ್ಸಿನ ಮಿತಿ 70 ವರ್ಷಕ್ಕೆ ಹೆಚ್ಚಳ; ಸಿಎಂ ಮಾಧ್ಯಮ ಸಲಹೆಗಾರ ಪ್ರಭಾಕರ್‌ಗೆ ಅಭಿನಂದನೆ

blank

 

ಬೆಂಗಳೂರು:
ಪತ್ರಿಕಾ ವಿತರಕರಿಗಾಗಿ ರೂಪಿಸಲಾಗಿರುವ ಯೋಜನೆಯ ವಯಸ್ಸಿನ ಮಿತಿಯನ್ನು ಹೆಚ್ಚಳ ಮಾಡಿದ್ದಕ್ಕಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ಅಭಿನಂದಿಸಿದರು.
ಅಸಂಘಟಿತ ವಲಯದಲ್ಲಿರುವ ಪತ್ರಿಕಾ ವಿತರಕ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆಯು ರೂಪಿಸಿರುವ ಯೋಜನೆಯ ವಯಸ್ಸಿನ ಮಿತಿಯನ್ನು ಈ ಮೊದಲು 16 ವರ್ಷದಿಂದ 60 ವರ್ಷಕ್ಕೆ ಮಾತ್ರ ಸೀಮಿತ ಮಾಡಲಾಗಿತ್ತು. ಇದರಿಂದ ಸಾವಿರಾರು ಪತ್ರಿಕಾ ವಿತರಕರು ಯೋಜನೆ ಪ್ರಯೋಜನೆ ಪಡೆಯಲಾಗದೆ ಸಮಸ್ಯೆಯಲ್ಲಿರುವುದನ್ನು ಗಮನಕ್ಕೆ ತಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು.
ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯ ವಯಸ್ಸಿನ ಮಿತಿಯನ್ನು 70 ವರ್ಷಕ್ಕೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದ್ದು ಸ್ವಾಗತಾರ್ಹವಾಗಿದ್ದು, ಅದಕ್ಕಾಗಿ ಅಭಿನಂದನೆ ಸಲ್ಲಿಸುವುದಾಗಿ ಅವರುಗಳು ತಿಳಿಸಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕೆ.ವಿ.ಪ್ರಭಾಕರ್ ಅವರು, ಪತ್ರಿಕಾ ವಿತರಕರ ಬಗ್ಗೆ ಮುಖ್ಯಮಂತ್ರಿಗಳಿಗೆ ಕಾಳಜಿ ಇದ್ದು, ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಕಾರಣಕರ್ತರಾಗಿದ್ದಾರೆ ಎಂದರು.
ಯೋಜನೆಯಲ್ಲಿ ವಯಸ್ಸಿನ ಮಿತಿ ಸಮಸ್ಯೆ ಆಗುತ್ತಿರುವ ಬಗ್ಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ತಮಗೆ ಪತ್ರ ಬರೆದು ಗಮನ ಸೆಳೆದಿದ್ದರಿಂದ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಪತ್ರಿಕಾ ವಿತರಕರಿಗೆ ಅನುಕೂಲವಾಗಲಿ ಎನ್ನುವ ದೃಷ್ಟಿಯಿಂದ ಸರ್ಕಾರ ಆದೇಶ ಹೊರಡಿಸಿದೆ ಎಂದು ಪ್ರಭಾಕರ್ ಅವರು ಹೇಳಿದರು.
ಈ ಸಂದರ್ಭದಲ್ಲಿ ಪ್ರೆಸ್ ಕ್ಲಬ್ ಮಾಜಿ ಅಧ್ಯಕ್ಷ ಸದಾಶಿವ ಶೆಣೈ, ಜಗದೀಶ್ ತಂಡ್ರೆ ಇದ್ದರು.

Share This Article

ಅಧಿಕ ಬಿಪಿ ಇರುವವರು ಯಾವ ಆಹಾರದಿಂದ ದೂರವಿರಬೇಕು ಎಂದು ನಿಮಗೆ ತಿಳಿದಿದೆಯೇ? high blood pressure

high blood pressure: ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಬಿಪಿ ಸಮಸ್ಯೆಯೂ ಒಂದು. ಅಧಿಕ…

ಶಿವನ ಕೃಪೆಗೆ ಪಾತ್ರರಾಗಲು ಈ ಒಂದು ಕೆಲಸ ಮಾಡಬೇಕು! Lord Shiva Worship

Lord Shiva Worship: ಪರಮೇಶ್ವರ ಹಿಂದೂಗಳು ಹೆಚ್ಚು ಪೂಜಿಸುವ ದೇವರುಗಳಲ್ಲಿ ಒಂದಾಗಿದೆ. ಭಗವಂತನನ್ನು ಒಂದೊಂದು ಸ್ಥಳದಲ್ಲಿ…

ಈ ದಿನಾಂಕಗಳಂದು ಜನಿಸಿದ ಮಹಿಳೆಯರು ತಮ್ಮ ಗಂಡನಿಗೆ ಅದೃಷ್ಟ ಹೊತ್ತು ತರುತ್ತಾರೆ! Numerology

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಸಂಖ್ಯೆಗಳು ನಮ್ಮ…