ಹೃದಯವಂತಿಕೆ ಬೆಳೆಸಿದರೆ ಉತ್ತಮ ಸಮಾಜ : ವಿಶ್ರಾಂತ ಕುಲಪತಿ ಪ್ರೊ.ಕೆ.ಚಿನ್ನಪ್ಪ ಗೌಡ ಅಭಿಮತ

New Project (23)
Published on

ಉಳ್ಳಾಲ: ಇಂದಿನ ಆಧುನಿಕ ಕಾಲಟ್ಟದಲ್ಲಿ ಮಾನವೀಯ ಮೌಲ್ಯ, ಸಾಮಾಜಿಕ ಸ್ವಾಸ್ಥ್ಯ ಕುಸಿಯುತ್ತಿದ್ದು, ಸಮಾಜದಲ್ಲಿ ನಡೆಯುತ್ತಿರುವ ಅನೇಕ ಘಟನೆಗಳೇ ಇದಕ್ಕೆ ಸಾಕ್ಷಿ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಧಾರ್ಮಿಕ ಆಚರಣೆಗಳನ್ನು ನಡೆಸುವ ಮೂಲಕ ಜನಮನದಲ್ಲಿ ಹೃದಯವಂತಿಕೆ ಬೆಳೆಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಪೂರಕ ವಾತಾವರಣ ನಿರ್ಮಿಸಬೇಕು ಎಂದು ಹಾವೇರಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಕೆ.ಚಿನ್ನಪ್ಪ ಗೌಡ ಅಭಿಪ್ರಾಯಪಟ್ಟರು.

ಕೊಣಾಜೆ ಗ್ರಾಮದ ಪಟ್ಟೋರಿ ಶ್ರೀ ನಾಗಬ್ರಹ್ಮ ಉಳ್ಳಾಲ್ತಿ ಧರ್ಮರಸರ ಮಾಡದಲ್ಲಿ ಧರ್ಮನಡಾವಳಿ ಪ್ರಯುಕ್ತ ಮಂಗಳವಾರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಧರ್ಮನಡಾವಳಿ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಪುಲ್ಲು ಅಧ್ಯಕ್ಷತೆ ವಹಿಸಿ ಮಾತನಾಡಿ, ಕರಾವಳಿಯಲ್ಲಿ ನಡೆಯುವ ಯಕ್ಷಗಾನ, ಭೂತಾರಾಧನೆ ನಮ್ಮ ನಾಡಿನ ಸಂಸ್ಕೃತಿಯ ಪ್ರತೀಕವಾಗಿ ಬೆಳೆದು ಬಂದಿದೆ. ಇದಕ್ಕೆ ಯಾವುದೇ ಅಪಚಾರವಾಗದಂತೆ ಮುನ್ನಡೆಯಬೇಕು ಎಂದರು.

ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಎಚ್.ಕೆ.ಪುರುಷೋತ್ತಮ ಅಂಚನ್, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್‌ನ ನಿಕಟಪೂರ್ವ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್, ಕೂಟತ್ತಾಜೆ ಕ್ಷೇತ್ರದ ಆಡಳಿತ ಮೊಕ್ತೇಸರ ಶೈಲೇಂದ್ರ ಭರತ್ ನಾಯ್ಕ ನಚ್ಚಗುತ್ತು, ಕರ್ನಾಟಕ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಅಸೈಗೋಳಿ ಗುಳಿಗ ಕೊರಗಜ್ಜ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರವಿ ರೈ ಪಜೀರು, ಮುಖಂಡರಾದ ಕೆ.ಟಿ.ಸುವರ್ಣ, ಸೀತಾರಾಮ ಶೆಟ್ಟಿ ನೆತ್ತಿಲಬಾಳಿಕೆ, ಪುರುಷೋತ್ತಮ ಅಂಚನ್, ಉದ್ಯಮಿ ಪ್ರಕಾಶ್, ನಿವೃತ್ತ ಶಿಕ್ಷಕ ರವೀಂದ್ರ ರೈ ಕಲ್ಲಿವಾರ್, ಗಡಿಪ್ರಧಾನರಾದ ತಿಮ್ಮಯ್ಯ ಕಾಜವ ಯಾನೆ ದಿವಾಕರ ಭಂಡಾರಿ, ಧರ್ಮನಡಾವಳಿ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ ಮಿತ್ತಕೋಡಿ ಮೊದಲಾದವರಿದ್ದರು.

ಶ್ರೀನಿವಾಸ ಶೆಟ್ಟಿ ಪುಲ್ಲು ಪ್ರಸ್ತಾವಿಸಿದರು. ಸಂಚಾಲಕ ಪ್ರವೀಣ್ ಪಟ್ಟೋರಿ ವಂದಿಸಿದರು. ರವಿ ಪಟ್ಟೋರಿ ಮತ್ತು ಮೋಹನ್ ಶಿರ್ಲಾಲ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net