

ಬಂಟ್ವಾಳ: ಭಯೋತ್ಪಾದಕರು ಯಾವತ್ತೂ ಜಾತಿ, ಪಕ್ಷ, ಭಾಷೆ, ಊರು ಕೇಳುವುದಿಲ್ಲ. ಹಾಗಾಗಿ ನಾವೆಲ್ಲರೂ ಈ ಎಲ್ಲ ವಿಷಯ ಬದಿಗೊತ್ತಿ ಒಗ್ಗಟ್ಟಾಗುವ ಕಾಲ ಸನ್ನಿಹಿತವಾಗಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ಬಿ.ಮೂಡ ಗ್ರಾಮದ ಪಲ್ಲಮಜಲು ಶ್ರೀ ರಾಮಭಕ್ತಾಂಜನೇಯ ಭಜನಾ ಮಂದಿರದಲ್ಲಿ ನಡೆಯಲಿರುವ 108 ಪವಮಾನ ಪಾರಾಯಣ ಸಹಿತ ಮಹಾಪವಮಾನ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು. ಮೌನಪ್ರಾರ್ಥನೆ ಮೂಲಕ ಕಾಶ್ಮೀರ ದುರ್ಘಟನೆಯಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಯಾಗ ಸಮಿತಿ ಅಧ್ಯಕ್ಷ ಸಂದೇಶ್ ಶೆಟ್ಟಿ, ಪ್ರಮುಖರಾದ ಸುಲೋಚನಾ ಜಿ.ಕೆ. ಭಟ್, ಗಣೇಶ್ ದಾಸ್ ಪಲ್ಲಮಜಲು, ಸೇಸಪ್ಪ ದಾಸ್ ಪಲ್ಲಮಜಲು, ಸಂದೇಶ್ ದರಿಬಾಗಿಲು ಮತ್ತಿತರರು ಉಪಸ್ಥಿತರಿದ್ದರು. ಪುರಸಭಾ ಸದಸ್ಯ ಹರಿಪ್ರಸಾದ್ ಭಂಡಾರಿಬೆಟ್ಟು ಸ್ವಾಗತಿಸಿದರು. ರಾಮ್‌ದಾಸ್ ಬಂಟ್ವಾಳ ಪ್ರಸ್ತಾವನೆಗೈದರು. ಭರತ್ ಕೊಟ್ಟಾರಿ ಕಲ್ಲಡ್ಕ ನಿರೂಪಿಸಿದರು. ಸತೀಶ್ ಪಲ್ಲಮಜಲು ವಂದಿಸಿದರು.
ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಹಿಂದು ಸಮಾಜಕ್ಕೆ ಶಕ್ತಿ ತುಂಬುವ ಕಾರ್ಯ ನಡೆಯಬೇಕಿದೆ. ಶತಮಾನಗಳಿಂದ ಅನೇಕ ಆಕ್ರಮಣ ಎದುರಿಸುತ್ತಾ ಬಂದಿರುವ ಹಿಂದು ಸಮುದಾಯಕ್ಕೆ ಆಂಜನೇಯ ಸ್ವಾಮಿಯ ಶಕ್ತಿ ಪ್ರಾಪ್ತಿಯಾಗಲಿ. ಆ ಮೂಲಕ ಆದಷ್ಟು ಬೇಗ ಕಾಶ್ಮೀರದಲ್ಲಿ ನಡೆದ ಘೋರ ಕೃತ್ಯಕ್ಕೆ ತಕ್ಕ ಶಾಸ್ತಿಯಾಗಲಿ. ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀಧಾಮ ಮಾಣಿಲ https://www.vijayavani.net/open-drainage-problem https://www.vijayavani.net/puttur-bjp-secretary