ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ನಟಿ ಪವಿತ್ರಾ ಗೌಡ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆಯನ್ನು ಇದೀಗ ಹೈಕೋರ್ಟ್ (Highcourt) ಮತ್ತೊಮ್ಮೆ ಮುಂದೂಡಿದೆ.
ಕಳೆದ ಬಾರಿ ಸಿಟಿ ಸಿವಿಲ್ ಕೋರ್ಟ್ನಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತು. ಈ ಹಿನ್ನಲೆ ಹೈಕೋರ್ಟ್ಗೆ ಜಾಮೀನು ಕೋರಿ ಪವಿತ್ರಾ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ವಿಚಾರಣೆಯನ್ನು ಇದೇ ತಿಂಗಳ 21ಕ್ಕೆ ನಡೆಸುವುದಾಗಿ ಮುಂದೂಡಿಕೆ ಮಾಡಿದೆ.