ಬೆಂಗಳೂರು: ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಜೈಲು ಸೇರಿದ್ದ ನಟ ದರ್ಶನ್ ಅವರ ಗೆಳತಿ ಪವಿತ್ರಾ ಗೌಡಗೆ (Pavithra Gowda) ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದ್ದು, ಬಂಧನವಾದ ಆರು ತಿಂಗಳ ಬಳಿಕ ಬಿಡುಗಡೆ ಭಾಗ್ಯ ಲಭಿಸಿದೆ. ಇನ್ನೂ ಪವಿತ್ರಾ ಗೌಡ ಅವರ ಬಿಡುಗಡೆಗೆ ಸಂಬಂಧಿಸಿದಂತೆ ಅವರ ಮಗಳಾದ ಖುಷಿ ಗೌಡ (Kushi Gowda) ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್ ಒಂದು ವೈರಲ್ ಆಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ.
ಯಾವಾಗಲೂ ನಮ್ಮನ್ನು ನೋಡಿಕೊಳ್ಳುವ ದೇವರು ಇದ್ದಾನೆ ಎಂದು ನಮಗೆಲ್ಲರಿಗೂ ತಿಳಿದಿದೆ. ಕಠಿಣ ಸಮಯದಲ್ಲಿ ಹೋರಾಡಲು ಮತ್ತು ನಮಗೆ ನಿಜವಾಗಿಯೂ ಅಗತ್ಯವಿರುವಾಗ ಸಹಾಯ ಮಾಡಲು ಅವನು ನಮಗೆ ಶಕ್ತಿಯನ್ನು ನೀಡುತ್ತಾನೆ! ಓಂ ನಮಃ ಶಿವಾಯ ಎಂದು ಸಾಮಾಜಿಕ ಜಾಲತಾಣದಲ್ಲಿ ತಾಯಿಯ ಜತೆ ಇರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಸದ್ಯ ವೈರಲ್ ಆಗಿದೆ.
ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಗೌಡಗೆ (Pavithra Gowda) ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ವಿಚಾರ ತಿಳಿದು ತಮ್ಮ ಸೆಲ್ನಲ್ಲಿಯೇ ಕುಣಿದು ಕುಪ್ಪಳಿಸಿದ್ದು, ಸದ್ಯಕ್ಕೆ ಜೈಲಿನಿಂದ ರಿಲೀಸ್ ಆಗೋದು ಡೌಟ್ ಎಂದು ಹೇಳಲಾಗಿದೆ. ಜಾಮೀನು ಪ್ರತಿ ಜೈಲಿನ ಅಧಿಕಾರಿಗಳಿಗೆ ಲಭ್ಯವಾಗದ ಕಾರಣ ಬಿಡುಗಡೆ ಪ್ರಕ್ರಿಯೆ ತಡವಾಗಿದ್ದು, ಸೋಮವಾರ (ಡಿಸೆಂಬರ್ 16) ಜೈಲಿನಿಂದಲೇ ಬಿಡುಗಡೆ ಆಗಲಿದ್ದಾರೆ.
ರೇಣುಕಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ತಯಾರಿ ನಡೆಸಿದೆ ಎಂದು ಹೇಳಲಾಗಿದೆ. ಆರೋಪಿಗಳಿಗೆ ಜಾಮೀನು ದೊರೆತರು ಸಂಕಷ್ಟ ತಪ್ಪಿಲ್ಲ ಎಂಬ ಮಾತು ಕೇಳಿ ಬರುತ್ತಿದ್ದು, ಮುಂದಿನ ದಿನಗಳಲ್ಲಿ ಇದು ಯಾವ ಹಂತ ತಲುಪಲಿದೆ ಎಂದು ಕಾದು ನೋಡಬೇಕಿದೆ.
ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ಗೆ ಜಾಮೀನು; ಪತ್ನಿ Vijayalakshmi ಪೋಸ್ಟ್ ವೈರಲ್