

ಆಂಧ್ರಪ್ರದೇಶ: ಟಾಲಿವುಡ್ನ ಪವರ್ ಸ್ಟಾರ್ ಪವನ್ ಕಲ್ಯಾಣ್ ಮತ್ತು ಸುಪ್ರೀಮ್ ಹೀರೋ ಸಾಯಿ ಧರಮ್ ತೇಜ್ ನಟನೆಯ ತೆಲುಗು ಚಿತ್ರ 'ಬ್ರೋ' ಜುಲೈ 28, 2023 ರಂದು ಬಹುತೇಕ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತು. ಸದ್ಯ ಥಿಯೇಟರ್ಗಳಲ್ಲಿ ಅಭಿಮಾನಿಗಳನ್ನು ರಂಜಿಸಿದ ಈ ಸಿನಿಮಾ ಇದೀಗ ಒಟಿಟಿ ವೇದಿಕೆಯಲ್ಲೂ ಮನರಂಜಿಸಲು ಮುಂದಾಗಿದೆ.
ಸಮುದ್ರಕನಿ ನಿರ್ದೇಶನದ 'ಬ್ರೋ' ಸಿನಿಮಾ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಈ ಹಿಂದೆಯೇ ಚಿತ್ರತಂಡ ಘೋಷಿಸಿದಂತೆ ಚಿತ್ರವು ಒಟಿಟಿಯಲ್ಲಿ ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲಿ ರಿಲೀಸ್ ಆಗಲಿದೆ ಎಂದು ತಿಳಿಸಿತ್ತು. ಅದರಂತೆಯೇ ಈಗ ನೆಟ್ಫ್ಲಿಕ್ಸ್ನಲ್ಲಿ ಚಿತ್ರವನ್ನು ಸ್ಟ್ರೀಮಿಂಗ್ ಮಾಡಲಾಗಿದೆ.
ಬ್ರೋ ಸಿನಿಮಾವನ್ನು ಚಿತ್ರಮಂದಿರಗಳಲ್ಲಿ ವೀಕ್ಷಿಸಲು ಸಾಧ್ಯವಾಗದ ಪ್ರೇಕ್ಷಕರಿಗೆ ಇದೀಗ ಚಿತ್ರವು ನೆಟ್ಫ್ಲಿಕ್ಸ್ನಲ್ಲಿ ಲಭ್ಯವಿದೆ. ಚಿತ್ರದಲ್ಲಿ ಪವನ್ ಕಲ್ಯಾಣ್ಗೆ ನಾಯಕಿಯಾಗಿ ಕೇತಿಕಾ ಶರ್ಮಾ ನಟಿಸಿದ್ದಾರೆ. ಪ್ರಿಯಾ ಪ್ರಕಾಶ್, ಬ್ರಹ್ಮಾನಂದಂ, ರೋಹಿಣಿ, ವೆನ್ನೆಲ ಕಿಶೋರ್, ರಾಜಾ ಚೆಂಬೋಲು ಸೇರಿದಂತೆ ಇತರರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ,(ಏಜೆನ್ಸೀಸ್).