More

  ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಪರ ಪವನ್ ಕಲ್ಯಾಣ್ ಪ್ರಚಾರ! ಇಲ್ಲಿದೆ ಮಾಹಿತಿ?

  ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ನಡುವೆ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಏಪ್ರಿಲ್ 18 ಗುರುವಾರ ಸಂಜೆ 5 ಗಂಟೆಗೆ ನಗರದ ಹೊರವಲಯದಲ್ಲಿ ತೆಲುಗು ಚಿತ್ರರಂಗದ ಖ್ಯಾತ ನಟ ಪವನ್ ಕಲ್ಯಾಣ್ ಚಿಕ್ಕಬಳ್ಳಾಪುರದಲ್ಲಿ ತಮ್ಮ ಪರ ಪ್ರಚಾರ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

  ಇದನ್ನೂ ಓದಿ: ಛತ್ತೀಸ್‍ಗಢದಲ್ಲಿ ಎನ್‍ಕೌಂಟರ್‌ಗೆ 18 ಮಾವೋವಾದಿಗಳ ಬಲಿ

  ಆಂಧ್ರಪ್ರದೇಶದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಪವನ್ ಕಲ್ಯಾಣ್​ ಅವರ ಪ್ರಚಾರ ವೇಳಾಪಟ್ಟಿ ಮತ್ತು ಕಾರ್ಯಕ್ರಮಗಳು ಕಾಂಗ್ರೆಸ್​ಗೆ ಹೇಗೆ ಗೊತ್ತಾಗುತ್ತೆ ಎಂದು ವರದಿಗಾರರ ಪ್ರಶ್ನೆಯೊಂದಕ್ಕೆ ಸುಧಾಕರ್ ಉತ್ತರಿಸಿದರು.

  ಏ.20 ರಂದು ಮೋದಿ ಅವರು ಚಿಕ್ಕಬಳ್ಳಾಪುರ ಮತ್ತು ದೇವನಹಳ್ಳಿ ನಡುವೆ ಇರುವ ಅಲಗುರ್ಕಿ ಬಳಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ಜನರನ್ನು ಉದ್ದೇಶಿಸಿ ಮಾತಾಡಲಿದ್ದಾರೆ. ಈ ಬೃಹತ್ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆ ನಡೆಯುತ್ತಿದೆ ಎಂದು ಸುಧಾಕರ್ ಹೇಳಿದರು.

  ವಿಶ್ವಗುರು ಮೋದಿ ಆಗಮನ ಸುದ್ದಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಲ್ಲಿ ಉತ್ಸಾಹ ಹಿಮ್ಮಡಿಗೊಂಡಿದೆ. ಈ ಕಾರ್ಯಕ್ರಮಕ್ಕೆ ಲಕ್ಷಾಂತರ ಕಾರ್ಯಕರ್ತರು ಸಾಕ್ಷಿಯಾಗಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಹೇಳಿದರು.

  ಕಾಂಗ್ರೆಸ್​ ವಿರುದ್ಧ ಎಫ್​ಐಆರ್ ದಾಖಲಿಸಿದ ಬಾಲಿವುಡ್​ ನಟ ಅಮೀರ್ ಖಾನ್..! ಕಾರಣ ಹೀಗಿದೆ?

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts