

ಅಮರಾವತಿ: ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯಾಗಲು ಜನಸೇನಾ ಪಕ್ಷದ ಮುಖ್ಯಸ್ಥ ಹಾಗೂ ಶಾಸಕ ಪವನ್ ಕಲ್ಯಾಣ್ ಆಸಕ್ತಿ ತೋರುತ್ತಿದ್ದಾರೆ.
ಆಂಧ್ರಪ್ರದೇಶದಲ್ಲಿ ತೆಲುಗು ದೇಶಂ, ಜನಸೇನಾ ಮತ್ತು ಬಿಜೆಪಿಯನ್ನೊಳಗೊಂಡ ಎನ್ಡಿಎ ಮೈತ್ರಿಕೋಟ ಜಯಭೇರಿ ಬಾರಿಸಿದ್ದು ತಿಳಿದ ಸಂಗತಿಯೇ. ಶೀಘ್ರದಲ್ಲೇ ಸರ್ಕಾರ ಅಸ್ಥಿತ್ವಕ್ಕೆ ಬರಲಿದ್ದು, ಪವನ್ ಉಪಮುಖ್ಯಮಂತ್ರಿ ಹುದ್ದೆಗೆ ಆಸಕ್ತಿ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.
ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಮತ್ತು ಅವರ ಪತ್ನಿ ಅನಾ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಪವನ್ ಕಲ್ಯಾಣ್ ಆಂಧ್ರಪ್ರದೇಶ ಸರ್ಕಾರಕ್ಕೆ ಸೇರಲು ಇಚ್ಛೆ ವ್ಯಕ್ತಪಡಿಸಿದ್ದಾರೆ.
ಆಗ ಆಂಧ್ರಪ್ರದೇಶದಲ್ಲಿ ಉಪಮುಖ್ಯಮಂತ್ರಿ ಹುದ್ದೆಯ ನಿರೀಕ್ಷೆಯಲ್ಲಿರುವುದಾಗಿ ಜನಸೇನಾ ಮುಖ್ಯಸ್ಥರು ಬಹಿರಂಗಪಡಿಸಿದ್ದಾರೆ ಎಂದು ವರದಿಯಾಗಿದೆ.