More

    ಗ್ರಾಪಂ ನೌಕರಿಗೆ ಕನಿಷ್ಟ ವೇತನ ಪಾವತಿ; ಪಂಚಾಯತ್ ರಾಜ್ ಇಲಾಖೆ ಸುತ್ತೋಲೆ

    ಬೆಂಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಟ ವೇತನ ಕಾಯ್ದೆ ಅನ್ವಯ ವೇತನ ಪಾವತಿಸುವಂತೆ ಪಂಚಾಯತ್ ರಾಜ್ ಆಯುಕ್ತಾಲಯ ಸುತ್ತೋಲೆ ಹೊರಡಿಸಿದೆ.

    ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳು ಕಾರ್ಮಿಕ ಇಲಾಖೆಯ ಕನಿಷ್ಟ ವೇತನ ಕಾಯ್ದೆ ದರಗಳ ಅನ್ವಯ ಮಾತ್ರ ಸಿಬ್ಬಂದಿ ವೇತನ ಪಾವತಿಸಬೇಕು. ಯಾವುದೇ ಕಾರಣಕ್ಕೂ ಹೆಚ್ಚುವರಿ ಪಾವತಿ ಮಾಡಲು ಅವಕಾಶವಿಲ್ಲ. ಆದರೆ ನಿಯಮಾನುಸಾರ ನೇಮಕಗೊಂಡ ಸಿಬ್ಬಂದಿಗೆ ಪ್ರಸ್ತುತ ಪಾವತಿಸುತ್ತಿರುವ ವೇತನ ಕಾರ್ಮಿಕ ಇಲಾಖೆ ನಿಗದಿಪಡಿಸಿದ ಕನಿಷ್ಟ ವೇತನಕ್ಕಿಂತ ಹೆಚ್ಚಾಗಿದ್ದಲ್ಲಿ ಸದರಿ ವೇತನದಲ್ಲಿ ಸರ್ಕಾರದಿಂದ ಬಿಡುಗಡೆಗೊಳಿಸಿದ ಮೊತ್ತದಲ್ಲಿ ಕನಿಷ್ಟ ವೇತನ ಮಾತ್ರ ಪಾವತಿಸಬೇಕು. ಹೆಚ್ಚುವರಿ ಮೊತ್ತವನ್ನು ಗ್ರಾಮ ಪಂಚಾಯಿತಿಗಳು ತಮ್ಮ ಸ್ವಂತ ಸಂಪನ್ಮೂಲದ ಅನುದಾನದಲ್ಲಿ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts