More

    ವಿಶ್ವಕಪ್​ 2023; ಭಾರತದಲ್ಲಿ ಆಡಲು ಪಾಕಿಸ್ತಾನಕ್ಕೆ ಈ ನಗರ ಸುರಕ್ಷಿತ ಅಲ್ಲವಂತೆ!

    ನವದೆಹಲಿ: ಭಾರತದ ಆತಿಥ್ಯದಲ್ಲಿ ನಡೆಯುವ ಏಕದಿನ ವಿಶ್ವಕಪ್​ ವೇಳಾಪಟ್ಟಿ ಬಿಡುಗಡೆಗೂ ಮುನ್ನವೇ ಖ್ಯಾತೆ ತೆಗೆದಿರುವ ಪಾಕಿಸ್ತಾನ ಭಾರತದಲ್ಲಿ ನಾವು ಆಡುವುದಿಲ್ಲ ಎಂದು ಹೇಳಿದೆ.

    ಈ ಕುರಿತು ಪಾಕಿಸ್ತಾನ ಕ್ರಿಕೆಟ್​ ಬೋರ್ಡ್​(PCB) ಅಧ್ಯಕ್ಷ ನಜಮ್​ ಸೇಥಿ ಹೇಳಿಕೆ ನೀಡಿದ್ದು ಭದ್ರತೆಯ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.

    ನಾವು ಆಡುವುದಿಲ್ಲ

    ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್​ ಪಂದ್ಯವು ಅಹಮದಬಾಡ್​ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಸಾಧ್ಯತೆಗಳು ದಟ್ಟವಾಗಿದೆ.

    PCB

    ಇನ್ನು ಈ ಕುರಿತು ಮಾತನಾಡಿರುವ ನಜಮ್​ ಸೇಥಿ ನಾವು ಭದ್ರತೆಯೆ ದೃಷ್ಟಿಯಿಂದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಡಲು ಸಾಧ್ಯವಿಲ್ಲ. ಬದಲಿ ತಾಣದಲ್ಲಿ ಪಂದ್ಯ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

    ಇದನ್ನೂ ಓದಿ: WORLD CUP 2023: ವಿಶ್ವಕಪ್​ ಆಡಲು ಪಾಕಿಸ್ತಾನಕ್ಕೆ ಭಾರತದ ಈ 2 ನಗರಗಳು ಮಾತ್ರ ಸುರಕ್ಷಿತವಂತೆ!

    ನಾವು ಬರಬಾರದೆಂದು ಈ ರೀತಿ ಮಾಡುತ್ತಿದ್ದಾರೆ

    ಚೆನ್ನೈ ಮತ್ತು ಕೊಲ್ಕತ್ತಾದಲ್ಲಿ ಭಾರತ ಹಾಗೂ ಪಾಕಿಸ್ತಾನದ ನಡುವೆ ಪಂದ್ಯ ನಡೆದರೆ ಹೆಚ್ಚು ಅರ್ಥಪೂರ್ಣವಾಗಿರುತ್ತದೆ. ಆದರೆ, ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆದರೆ ಹೊಸ ಸಮಸ್ಯೆಗಳು ಉದ್ಭವಿಸುತ್ತವೆ ಎಂದು ಹೇಳಿದ್ದಾರೆ.

    ಮೊದಲಿಗೆ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವನ್ನು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಸುವ ಬಗ್ಗೆ ನನಗೆ ಮಾಹಿತಿ ತಿಳಿದಾಗ ಇದರಲ್ಲಿ ರಾಜಕೀಯ ಕೋನವಿದೆ.

    ಚೆನ್ನೈ ಹಾಗೂ ಕೊಲ್ಕತ್ತಾದಲ್ಲಿ ಪಂದ್ಯವನ್ನು ಆಯೋಜಿಸಿದ್ದರೆ ನಾವು ಮುಕ್ತ ಮನಸ್ಸಿನಿಂದ ಒಪ್ಪಿಕೊಳ್ಳುತ್ತಿದ್ದೆವು. ಆದರೆ, ಭದ್ರತೆಯ ದೃಷ್ಟಿಯಿಂದ ನಾವು ಅಹಮದಬಾದ್​ನಲ್ಲಿ ಆಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts