More

    ಚಾಂಪಿಯನ್ಸ್ ಟ್ರೋಫಿ ಆತಿಥ್ಯಕ್ಕೆ 3 ತಾಣ ಅಂತಿಮಗೊಳಿಸಿದ ಪಿಸಿಬಿ

    ಲಾಹೋರ್: ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ 2025ರ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯಿಂದ ಟೀಮ್ ಇಂಡಿಯಾ ಹೊರುಗುಳಿಯುವ ಸಾಧ್ಯತೆಗಳ ನಡುವೆಯೂ ಕರಾಚಿ, ಲಾಹೋರ್ ಮತ್ತು ರಾವಲ್ಪಿಂಡಿ ಮೈದಾನಗಳಲ್ಲಿ ಟೂರ್ನಿ ಆಯೋಜಿಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮುಂದಾಗಿದೆ.

    2017ರಲ್ಲಿ ಇಂಗ್ಲೆಂಡ್‌ನಲ್ಲಿ ಕೊನೆಯ ಬಾರಿಗೆ ನಡೆದ ಚಾಂಪಿಯನ್ಸ್ ಟ್ರೋಫಿ ಮುಂದಿನ ವರ್ಷ ಫೆಬ್ರವರಿ ಅಥವಾ ಮಾರ್ಚ್‌ನಲ್ಲಿ ಮರಳುವ ನಿರೀಕ್ಷೆ ಇದೆ. ಟೂರ್ನಿಯಲ್ಲಿ ಭಾಗವಹಿಸುವ ಬಗ್ಗೆ ಬಿಸಿಸಿಐ ಇದುವರೆಗೆ ಯಾವುದೇ ಅಧಿಕೃತ ನಿರ್ಧಾರ ತಿಳಿಸಿಲ್ಲ. ಒಂದು ವೇಳೆ ಭಾರತ, ಪಾಕಿಸ್ತಾನಕ್ಕೆ ತೆರಳಲು ನಿರಾಕರಿಸಿದರೆ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ನಡೆಸಲು ಐಸಿಸಿ ಪ್ರಯತ್ನಿಸಲಿದೆ ಎನ್ನಲಾಗಿದೆ. ಆದರೆ ಭಾರತಕ್ಕೆ ಅವಕಾಶ ಕಲ್ಪಿಸಲು ಟೂರ್ನಿಯಲ್ಲಿ ಯಾವುದೇ ರೀತಿಯ ಬದಲಾವಣೆ ನಡೆಸುವುದಿಲ್ಲ ಎಂದು ಪಿಸಿಬಿ ಪಟ್ಟುಹಿಡಿದಿದ್ದು, ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಪಾಕಿಸ್ತಾನದಲ್ಲಿನ ಪಂದ್ಯಗಳ ವೇಳಾಪಟ್ಟಿಯನ್ನು ಐಸಿಸಿಗೆ ರವಾನಿಸಲಾಗಿದೆ ಎಂದು ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ತಿಳಿಸಿದ್ದಾರೆ. ಐಸಿಸಿಯ ಭದ್ರತಾ ತಂಡದ ಜತೆಗೆ ಸಭೆ ನಡೆಸಿದ್ದು, ಇಲ್ಲಿನ ವ್ಯವಸ್ಥೆಗಳನ್ನು ನೋಡಿದ್ದಾರೆ. ಸ್ಟೇಡಿಯಂ ಮೇಲ್ದರ್ಜೆಗೇರಿಸುವ ಯೋಜನೆ ರೂಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
    ಕಳೆದ ವರ್ಷ ನಡೆದ ಏಷ್ಯಾಕಪ್ ಟೂರ್ನಿಗೆ ಪಾಕಿಸ್ತಾನ ಅಧಿಕೃತ ಆತಿಥೇಯ ರಾಷ್ಟ್ರವಾಗಿದ್ದರೂ, ಶ್ರೀಲಂಕಾದಲ್ಲಿ ಭಾರತದ ಪಂದ್ಯಗಳನ್ನು ಆಯೋಜಿಸುವ ಮೂಲಕ ಹೈಬ್ರಿಡ್ ಮಾದರಿಯಲ್ಲಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಟೂರ್ನಿ ನಡೆಸಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts