ನವದೆಹಲಿ: ನೆರೆಯ ರಾಷ್ಟ್ರ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯೂ ಶುರುವಾಗುವುದಕ್ಕೆ ತಿಂಗಳುಗಳೇ ಬಾಕಿ ಉಳಿದಿದ್ದು, ಒಂದಿಲ್ಲೊಂದು ಕಾರಣಕ್ಕೆ ಸದ್ದು ಮಾಡುತ್ತಿದೆ. ಈ ಪೈಕಿ ಹೆಚ್ಚು ಸದ್ದು ಮಾಡುತ್ತಿರುವ ವಿಚಾರ ಎಂದರೆ ಅದು ಭಾರತ ಹಾಗೂ ಪಾಕಿಸ್ತಾನ ನಡುವಿನ ಕಿತ್ತಾಟದ ವಿಚಾರವಾಗಿ ಸುದ್ದಿಯಾಗುತ್ತಿರುವ ಟೂರ್ನಿಯೂ ಈಗ ಮತ್ತೊಂದು ವಿಚಾರಕ್ಕೆ ಸದ್ದು ಮಾಡುತ್ತಿದೆ.
ಏಕೆಂದರೆ ಇಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ICC) ನೂತನ ಅಧ್ಯಕ್ಷರಾಗಿ ಜಯ್ ಷಾ ಆಯ್ಕೆಯಾಗಿದ್ದು, ಪಾಕಿಸ್ತಾನ ಕೂಡ ಜಯ್ ಷಾ ಅವರ ಆಯ್ಕೆಯನ್ನು ಬೆಂಬಲಿಸಿದೆ. ಆದರೆ, ಜಯ್ ಷಾ ಆಯ್ಕೆಯಾದ ಬೆನ್ನಲ್ಲೇ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ತಲೆನೋವೊಂದು ಎದುರಾಗಿದ್ದು, ಈ ಒಂದು ವಿಚಾರಕ್ಕೆ ಬೋರ್ಡ್ನ ಚಿಂತೆ ಮತ್ತಷ್ಟು ಹೆಚ್ಚಿಸಿದೆ.
ಎಲ್ಲರಿಗೂ ತಿಳಿದಿರುವ ಹಾಗೆ ಈ ಬಾರಿಯ ಟೂರ್ನಿಯೂ ಪಾಕಿಸ್ತಾನದ ನೆಲದಲ್ಲಿ ನಡೆಯುತ್ತಿದ್ದು, ಭಾರತ ಭಾಗಿಯಾಗಲ್ಲ ಎಂದು ಹೇಳಿದೆ. ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಿದರೆ ಮಾತ್ರ ಭಾಗಿಯಾಗುವುದಾಗಿ ಭಾರತ ಹೇಳಿದೆ. ಆದರೆ, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮಾತ್ರ ಇದಕ್ಕೆ ಒಪ್ಪದೆ ಐಸಿಸಿಗೆ ನಿರ್ಧಾರವನ್ನು ಪ್ರಕಟಿಸುವಂತೆ ಸೂಚಿಸಿ ಕೈ ತೊಳೆದುಕೊಂಡಿದೆ. ಇದೀಗ ಐಸಿಸಿಯ ಅಧ್ಯಕ್ಷರಾಗಿ ಜಯ್ ಷಾ ಆಯ್ಕೆಯಾಗಿದ್ದು, ಚಾಂಪಿಯನ್ಸ್ ಟ್ರೋಫಿ ಆತಿಥ್ಯದ ಹಕ್ಕು ಕೈತಪ್ಪುವ ಭೀತಿ ಪಾಕ್ ಕ್ರಿಕೆಟ್ ಬೋರ್ಡ್ಗೆ ಎದುರಾಗಿದೆ.
ಇದನ್ನೂ ಓದಿ: ಆಗಸ್ಟ್ 31ಕ್ಕೆ ನಿರ್ಧಾರವಾಗಲಿದೆ ಪವಿತ್ರಾ ಗೌಡ ಭವಿಷ್ಯ; ಎಸ್ಪಿಪಿ ಮಂಡಿಸಿದ ವಾದವೇನು?
ಭಾರತವು ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಲು ಮನವಿ ಮಾಡಿದರೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಒಪ್ಪಲೇಬೇಕಾದ ಅನಿವಾರ್ಯತೆ ಇದೆ. ಇಲ್ಲದಿದ್ದರೆ ಇಡೀ ಟೂರ್ನಿಯು ಕೈ ತಪ್ಪುವ ಸಾಧ್ಯತೆಯಿದೆ. ಹೀಗಾಗಿ ಬಿಸಿಸಿಐ ಮನವಿಗೆ ಪಿಸಿಬಿ ಮಣಿಯಲೇಬೇಕಾದ ಒತ್ತಡದಲ್ಲಿದೆ. ಒಂದು ವೇಳೆ ಪಿಸಿಬಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಲು ಮುಂದಾಗದಿದ್ದರೆ, ಐಸಿಸಿ ಪರ್ಯಾಯ ಆಯ್ಕೆಗಳನ್ನು ನೋಡಲಿದೆ. ಇದರಿಂದ ಯುಎಇ ಅಥವಾ ಶ್ರೀಲಂಕಾದಲ್ಲಿ ಟೂರ್ನಿಯನ್ನು ಸ್ಥಳಾಂತರಿಸಬಹುದು. ಇಂತಹ ಮಹತ್ವದ ನಿರ್ಧಾರ ತೆಗೆದುಕೊಳ್ಳುವುದು ಐಸಿಸಿ ಚೇರ್ಮನ್ ಕಮಿಟಿ ಎಂಬುದು ಗಮನಾರ್ಹ ಸಂಗತಿಯಾಗಿದೆ.
ಇದೀಗ ಐಸಿಸಿಯ ಅಧ್ಯಕ್ಷರಾಗಿ ಜಯ್ ಷಾ ಆಯ್ಕೆಯಾಗಿದ್ದಾರೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಯ ಭವಿಷ್ಯ ಜಯ್ ಶಾ ಅವರ ಅಂಗಳದಲ್ಲಿದೆ. ಹೀಗಾಗಿಯೇ ಐಸಿಸಿ ಸೂಚಿಸುವ ಯಾವುದೇ ಆಯ್ಕೆಯನ್ನು ಒಪ್ಪಲೇಬೇಕಾದ ಅನಿವಾರ್ಯತೆ ಪಿಸಿಬಿ ಮುಂದಿದೆ. ಒಟ್ಟಿನಲ್ಲಿ ಚಾಂಪಿಯನ್ಸ್ ಟ್ರೋಫಿ ಆಯೋಜನೆಗೆ ಸಕಲ ಸಿದ್ಧತೆಯಲ್ಲಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಜಯ್ ಷಾ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದ್ದು, ಪಿಸಿಬಿ ಐಸಿಸಿಯ ಯಾವುದೇ ನಿಬಂಧನೆಗೂ ಮಣಿಯಲೇಬೇಕಾದ ಅನಿವಾರ್ಯತೆಯಲ್ಲಿದೆ.