ಕಲುಷಿತ ನೀರು ಸೇವನೆಗೆ ಜನ ಅಸ್ವಸ್ಥ; ಪಿಡಿಒ ಅಮಾನತು

bidar water pollution incident
Published on

ಬೀದರ್: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನ‌ ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ವಹಿಸಿದ ಗ್ರಾಮ ಪಂಚಾಯತಿ ಪಿಡಿಓರನ್ನು ಅಮಾನತು ಮಾಡಲಾಗಿದೆ.

ಜೆಜೆಎಂ ಕಾಮಗಾರಿ ಪೈಪ್​ಗಳು ಓಡೆದ ಪರಿಣಾಮವಾಗಿ ಕಲುಷಿತ ನೀರು ಗ್ರಾಮಸ್ಥರ ಹೊಟ್ಡೆ ಸೇರಿದು ಇದಕ್ಕೆ ಗ್ರಾಮ ಪಂಚಾಯತಿ ಪಿಡಿಓ ನಿರ್ಲಕ್ಷ್ಯವೇ ಮುಖ್ಯ ಕಾರಣ ಎಂದು ಗುರುತಿಸಲಾಗಿದೆ. ಈ ಹಿನ್ನೆಲೆಯಲ್ಲಿ ಚಟನಳ್ಳಿ ಗ್ರಾಮ ಪಂಚಾಯತಿ ಪಿಡಿಓ ದೇವಪ್ಪರನ್ನ ಜಿಲ್ಲಾ ಪಂಚಾಯತ ಸಿಇಓ ಶಿಲ್ಪಾ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಸದ್ಯ ಬೀದರನ ಬರಿದಾಬಾದ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ 25ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿ ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಬ್ರಿಮ್ಸ್​ ಆಸ್ಪತ್ರೆಗೆ 15 ಜನರು ದಾಖಲಾಗಿದ್ದರೆ 10 ಜನರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವವರ ಪೈಕಿ ಮೂವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಆಸ್ಪತ್ರೆಗೆ ಭೇಟಿ ಅಸ್ವಸ್ಥಗೊಂಡವರ ಆರೋಗ್ಯ ವಿಚಾರಿಸಿದ್ದಾರೆ. ಈ ಸಂದರ್ಭ ಶಾಸಕರು ಸರ್ಕಾರದ ಕಲುಷಿತ ನೀರಿನಿಂದ ಅಸ್ವಸ್ಥಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರ ಖರ್ಚುವೆಚ್ವ ಸರ್ಕಾರವೇ ಭರಿಸಬೇಕು ಜೋತೆಗೆ ನಿರ್ಲಕ್ಷ್ಯ ಮಾಡಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಅದಲ್ಲದೇ ಖುದ್ದು ಶಾಸಕರೇ ಪಿಡಿಒಗೆ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದರಿಂದ ಸಸ್ಪೆಂಡ್ ಮಾಡಲಾಗಿದೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net