More

    ದೈಹಿಕ ಶಿಕ್ಷಣ ಶಿಕ್ಷಕರ 2,120 ಹುದ್ದೆ ಭರ್ತಿ; ಮಧು ಬಂಗಾರಪ್ಪ

    ಬೆಳಗಾವಿ
    ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಪ್ರಸ್ತುತ ಖಾಲಿ ಇರುವ ದೈಹಿಕ ಶಿಕ್ಷಣ ಶಿಕ್ಷಕರ ಪೈಕಿ 2,120 ಹುದ್ದೆಗಳನ್ನು ಭರ್ತಿ ಮಾಡುವ ಪ್ರಸ್ತಾವನೆಯು ಪರಿಶೀಲನೆಯಲ್ಲಿದ್ದು, ಆರ್ಥಿಕ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ವಿಧಾನ ಪರಿಷತ್‌ಗೆ ತಿಳಿಸಿದರು.

    ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಎಸ್.ವಿ. ಸಂಕನೂರ ಅವರು, 15 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಯಾಗಿಲ್ಲ. ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂಬ ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದರು. ಸರ್ಕಾರಿ ಪಪೂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರೇ ಇಲ್ಲ. ಸರ್ಕಾರ ಕೂಡಲೇ ಈ ಉಪನ್ಯಾಸಕರ ನೇಮಕ ಮಾಡಬೇಕು ಎಂದು ಆಗ್ರಹಿಸಿದರು. 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ನೇಮಕಾತಿಯಲ್ಲಿ ಭರ್ತಿಯಾಗದೇ ಖಾಲಿ ಉಳಿದ ಹುದ್ದೆಗಳಿಗೆ ಹೊಂದಣಿಕೆ ಮಾಡಿಕೊಳ್ಳುವ ಷರತ್ತಿಗೆ ಒಳಪಟ್ಟು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರ ಅನುಮತಿ ನೀಡಿದೆ. ಈ ಪೈಕಿ 1,648 ಹುದ್ದೆಗಳು ಮಾತ್ರ ಉಳಿದಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 200 ದೈಹಿಕ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸಮಾಲೋಚಿಸಲಾಗುತ್ತಿದೆ. ಪಪೂ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಇಲ್ಲ ಎಂದರು. ಇದಕ್ಕೆ ಸಿಡಿಮಿಡಿಗೊಂಡ ಸಂಕನೂರು ದೈಹಿಕ ಶಿಕ್ಷಣ ಉಪನ್ಯಾಸಕರನ್ನು ನೇಮಕ ಮಾಡುವ ೋಷಣೆ ಮಾಡಬೇಕು ಪಟ್ಟು ಹಿಡಿದರು. ಆಗ ಸಮಜಾಯಿಸಿ ನೀಡಿದ ಸಚಿವರು, ಆರ್ಥಿಕ ಇಲಾಖೆಯು 2023ರ ಜೂನ್ 14ರಂದು ದೈಹಿಕ ಶಿಕ್ಷಣ ಉಪನ್ಯಾಸಕರ 1 ಹುದ್ದೆಗೆ ಪ್ರಸ್ತುತ ಇರುವ 120 ವಿದ್ಯಾರ್ಥಿಗಳ ಕಾರ್ಯಭಾರದ ಮಾನದಂಡವನ್ನು 500 ವಿದ್ಯಾರ್ಥಿಗಳಿಗೆ ಹೆಚ್ಚಿಸಲು ನಿರ್ಣಯಿಸುವಂತೆ ಆರ್ಥಿಕ ಇಲಾಖೆ ಸಲಹೆ ನೀಡಿದ್ದು, ಸರ್ಕಾರದಲ್ಲಿ ಪರಿಶೀಲನೆಯಲ್ಲಿದೆ ಎಂದರು. ಆಗ ಸಂಕನೂರ ಅವರು, ಆರ್ಥಿಕ ಇಲಾಖೆ ವಿದ್ಯಾರ್ಥಿಗಳ ಸಂಖ್ಯೆಯ ಮಾನದಂಡ ಮಾಡಿ ಸರ್ಕಾರಕ್ಕೆ ತಿಳಿಸುವ ಅಧಿಕಾರ ಇಲ್ಲ. ಮೊದಲು ಶಾಲೆಗಳು ಹಾಗೂ ಪಪೂ ಕಾಲೇಜಿನಲ್ಲಿ ಮಂಜೂರಾದ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ ಭರ್ತಿ ಮಾಡುವಂತೆ ಒತ್ತಾಯಿಸಿದರು.

    ಬೆಳಗಾವಿ: ಪ್ರಸ್ತುತ ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಅನುದಾನದ ಲಭ್ಯತೆ ಆಧರಿಸಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಿರದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಲು ಕ್ರಮ ವಹಿಸಲಾಗುವುದು ಎಂದು ವಿಧಾನ ಪರಿಷಗತ್ ಸಭಾನಾಯಕ ಎನ್.ಎಸ್. ಭೋಷರಾಜು ತಿಳಿಸಿದರು.
    ಕಾಂಗ್ರೆಸ್‌ನ ಎಂ.ಎಲ್. ಅನಿಲ್‌ಕುಮಾರ ಪ್ರಶ್ನೋತ್ತರ ವೇಳೆ, ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದರು. ಕೇಂದ್ರದ ನೀತಿ ಆಯೋಗದನ್ವಯ ಸರ್ಕಾರಿ ವೈದ್ಯಕೀಯ ಕಾಲೇಜುಗಳಿರದ ಜಿಲ್ಲೆಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಹೊಸ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಕೇಂದ್ರ ಸರ್ಕಾರದಿಂದಲೇ ವೈದ್ಯಕೀಯ ಕಾಲೇಜು ತೆರೆಯುವ ಬಗ್ಗೆ ೋಷಣೆ ಮಾಡಿಲ್ಲ ಎಂದರು.

    ಸಚಿವರು ಗೈರು:
    ವಿಧಾನ ಪರಿಷತ್‌ನ ಪ್ರಶ್ನೋತ್ತರ ವೇಳೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಹಲವು ಸಚಿವರು ಗೈರಾಗಿದ್ದರು. ಸಚಿವ ಬದಲಿಗೆ ಸಭಾನಾಯಕ ಎನ್.ಎಸ್. ಭೋಷರಾಜು ಉತ್ತರಿಸುತ್ತಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಆಗ ಸಭಾಪತಿ ಬಸವರಾಜ ಹೊರಟ್ಟಿ ಮಧ್ಯ ಪ್ರವೇಶಿಸಿ, ಸಚಿವರು ಪೂರ್ವ ನಿರ್ಧರಿತ ಕಾರಣ ನೀಡಿ ಸನಕ್ಕೆ ಗೈರಾಗಿದ್ದಾರೆ. ಮುಂದೆ ಹೀಗಾಗಬಾರದು ಎಂದು ತಾಕೀತು ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts