ಆಧ್ಯಾತ್ಮ ಸಾಧನೆಯಿಂದ ಮಾತ್ರ ನೆಮ್ಮದಿ ಸಾಧ್ಯ

blank

ತರೀಕೆರೆ: ಮಾನವ ಜೀವನದ ಶ್ರೇಯಸ್ಸಿನ ಜತೆ ಉನ್ನತಿಗೆ ಧರ್ಮಾಚರಣೆ ಅಗತ್ಯ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.
ಅಜ್ಜಂಪುರ ತಾಲೂಕಿನ ಬುಕ್ಕಾಂಬುದಿ ಸಮೀಪದ ತಪೋ ಬೆಟ್ಟದಲ್ಲಿ ಕವಲೇದುರ್ಗದ ಮರುಳಸಿದ್ಧ ಶಿವಾಚಾರ್ಯ ಸ್ವಾಮೀಜಿಗಳು ಕೈಗೊಂಡ ಮೌನ ಪೂಜಾನುಷ್ಠಾನ ಮಂಗಲ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಭೌತಿಕ ಸಂಪತ್ತಿನಿಂದ ಶಾಂತಿ ಸಿಗದು. ಆಧ್ಯಾತ್ಮ ಸಾಧನೆಯಿಂದ ಮಾತ್ರ ನೆಮ್ಮದಿ ಸಾಧ್ಯ. ತಪಶ್ಚರ್ಯದಿಂದ ಆತ್ಮಬಲ ಸಮೃದ್ಧಿಯಾಗಲಿದೆ. ಪರಮ ತಪಸ್ವಿ ಲಿಂಗೈಕ್ಯ ಶ್ರೀಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳು ಬುಕ್ಕಾಂಬುದಿ ಬೆಟ್ಟದಲ್ಲಿ ಮೂರು ತಿಂಗಳ ಕಾಲ ತಪೋನುಷ್ಠಾನ ಮಾಡಿ ಜಾಗೃತಗೊಳಿಸಿದ ಪವಿತ್ರ ಕ್ಷೇತ್ರದಲ್ಲಿ ತೀರ್ಥಹಳ್ಳಿ ತಾಲೂಕಿನ ಕವಲೇದುರ್ಗ ಭುವನಗಿರಿ ಸಂಸ್ಥಾನ ಮಠದ ಮರುಳಸಿದ್ಧ ಶಿವಾಚಾರ್ಯ ಸ್ವಾಮೀಜಿಗಳು 11ದಿನಗಳ ಮೌನ ತಪೋನುಷ್ಠಾನ ಕೈಗೊಂಡು ಇಂದು ಮಂಗಲಗೊಳಿಸುತ್ತಿರುವುದು ಸಂತೋಷದ ಸಂಗತಿ ಎಂದರು.
ಶಿವತಪ, ಶಿವಕರ್ಮ, ಶಿವಜಪ, ಶಿವಧ್ಯಾನ ಮತ್ತು ಶಿವಜ್ಞಾನ ಎಂಬ ಪಂಚಯಜ್ಞಗಳ ಮೂಲಕ ಶಿವನನ್ನು ಪೂಜಿಸುವ ಧ್ಯಾನಿಸುವ ವಿಚಾರವನ್ನು ಶ್ರೀ ಜಗದ್ಗುರು ರೇಣುಕಾಚಾರ್ಯರು ಬೋಧಿಸಿದ್ದಾರೆ. ಲೋಕ ಕಲ್ಯಾಣ ಆತ್ಮಬಲ ವೈದ್ಧಿಗಾಗಿ ಕೈಕೊಂಡ ಅನುಷ್ಠಾನ ಭಕ್ತ ಸಂಕುಲಕ್ಕೆ ಹರ್ಷ ತಂದಿದೆ ಎಂದು ತಿಳಿಸಿದರು.
ಪೂಜಾ ಕಾರ್ಯಕ್ರಮದ ಬಳಿ ಶ್ರೀರಂಭಾಪುರಿ ಜಗದ್ಗುರುಗಳು ಕವಲೇದುರ್ಗ ಅನುಷ್ಠಾನ ಶ್ರೀಗಳಿಗೆ ರೇಷ್ಮೆ ಮಡಿ ಲ ಪುಷ್ಪ ನೀಡಿ ಹಾರೈಸಿದರು. ಶ್ರೀಗಳ ಮಾರ್ಗದರ್ಶನದಲ್ಲಿ ಹಳೇ ಹುಬ್ಬಳ್ಳಿ ಪಂಚಗೃಹ ಹಿರೇಮಠದ ನಿಯೋಜಿತ ಉತ್ತರಾಧಿಕಾರಿ ರೇಣುಕ ಪ್ರಸಾದ ಅವರು 11ದಿನಗಳ ವಿಶೇಷ ಪೂಜೆ ಕೈಂಕರ್ಯ ಕೈಗೊಂಡಿದ್ದ ಪರಿಣಾಮ ಅವರಿಗೂ ಶ್ರೀಪೀಠದಿಂದ ರೇಷ್ಮೆ ಶಾಲು ಸ್ಮರಣಿಕೆ ನೀಡಿ ಶ್ರೀರಂಭಾಪುರಿ ಜಗದ್ಗುರುಗಳು ಆಶೀರ್ವದಿಸಿದರು.
ತಾವರೆಕೆರೆ ಶಿಲಾಮಠದ ಡಾ.ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀಮದುಜ್ಜಯಿನಿ ಜಗದ್ಗುರು ಸಿದ್ಧಲಿಂಗ ಶಿವಾಚಾರ್ಯ ಟ್ರಸ್ಟಿನ ಉಪಾಧ್ಯಕ್ಷ ಎಸ್.ಎಂ.ವೀರಭದ್ರಪ್ಪ, ಕಾರ್ಯದರ್ಶಿ ಎಚ್.ಪಿ.ಸುರೇಶ, ಚಿಕ್ಕತೊಗಲೇರಿಯ ಈಶಣ್ಣ, ದಾವಣಗೆರೆ ಕೊಟ್ರೇಶ್ ಮತ್ತಿತರರಿದ್ದರು.

Share This Article

ಕ್ಯಾರೆಟ್​ ಬರ್ಫಿಗೆ ಫಿದಾ ಆಗದವರೇ ಇಲ್ಲ; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ | Recipe

ಕ್ಯಾರೆಟ್​​ ಹಲ್ವಾ ಎಲ್ಲರಿಗೂ ಇಷ್ಟ, ಅದಕ್ಕಾಗಿಯೇ ಕ್ಯಾರೆಟ್ ಹಲ್ವಾವನ್ನು ಎಲ್ಲಾ ಋತುವಿನಲ್ಲೂ ಹಲವಾರು ಬಾರಿ ತಯಾರಿಸಿ…

ಆರೋಗ್ಯಕರ ಹೃದಯಕ್ಕೆ ಮೊಟ್ಟೆ ಎಷ್ಟು ಸಹಕಾರಿ ಗೊತ್ತಾ?; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಮೊಟ್ಟೆಗಳು ಪ್ರೋಟೀನ್‌ನ ಉತ್ತಮ ಮೂಲವಾಗಿದ್ದು, ವಿಟಮಿನ್ ಬಿ, ಫೋಲೇಟ್, ಕೊಬ್ಬಿನಲ್ಲಿ ಕರಗುವ ಜೀವಸತ್ವಗಳು (ಎ, ಡಿ,…

ಕಣ್ಣಿನಪೊರೆ ಸಮಸ್ಯೆಗೆ ಪರಿಹಾರ ಏನೆಂದು ಆಲೋಚಿಸುತ್ತಿದ್ದೀರಾ?; ಇಲ್ಲಿದೆ ಸೂಕ್ತ ಮನೆಮದ್ದಿನ ಮಾಹಿತಿ | Health Tips

ಪ್ರಸ್ತುತ ಕಾರ್ಯನಿರತ ಜೀವನ ಮತ್ತು ಕಳಪೆ ಜೀವನಶೈಲಿಯಿಂದಾಗಿ ಅನೇಕ ಸಮಸ್ಯೆಗಳು ಉದ್ಭವಿಸುತ್ತಿವೆ. ಅದರಲ್ಲಿನ ಪ್ರಮುಖ ಸಮಸ್ಯೆಗಳಲ್ಲಿ…