More

    ಶಾಂತಿಯುತ ಮತದಾನಕ್ಕೆ ಕ್ರಮ

    ಹುಕ್ಕೇರಿ: ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿ ಚುನಾವಣೆ ಮತದಾನ ಪ್ರಕ್ರಿಯೆಯನ್ನು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.

    ಸ್ಥಳೀಯ ಎಸ್.ಕೆ. ಪ್ರೌಢಶಾಲೆಯಲ್ಲಿ ಶುಕ್ರವಾರ ಚುನಾವಣಾ ಕರ್ತವ್ಯ ಸಿಬ್ಬಂದಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

    ಮತದಾನ ಪ್ರಕ್ರಿಯೆ ಸುಗಮವಾಗಿ ನಡೆಸುವ ಸಲುವಾಗಿ ಸೂಕ್ಷ್ಮ, ಅತಿ ಸೂಕ್ಷ್ಮಮತಗಟ್ಟೆ ಗುರುತಿಸಲಾಗಿದೆ. ಅಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುವುದು. ಕೋವಿಡ್ ಸೋಂಕಿತರಿಗೆ ಪ್ರತ್ಯೇಕವಾಗಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು. ಜತೆಗೆ ಎಲ್ಲ ಮತಗಟ್ಟೆಗಳಲ್ಲಿ ಆರೋಗ್ಯ ಸಿಬ್ಬಂದಿ ನಿಯೋಜಿಸಿ, ಕರೊನಾ ಸೋಂಕು ಹರಡುವಿಕೆ ನಿಯಂತ್ರಣಕ್ಕಾಗಿ ಎಚ್ಚರ ವಹಿಸಲಾಗುವುದು ಎಂದರು.

    ಈ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡಲಾಗುತ್ತದೆ. ಹಾಗಾಗಿ, ಮತದಾನ ಪ್ರಕ್ರಿಯೆ ನಡೆಸುವುದು ಮತಗಟ್ಟೆ ಅಧಿಕಾರಿಗಳಿಗೆ ಸುಲಭವಾಗಲಿದೆ. ಆದರೂ, ಮತದಾನ ಪ್ರಕ್ರಿಯೆಯಲ್ಲಿ ಯಾವ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು. ತಹಸೀಲ್ದಾರ್ ಅಶೋಕ ಗುರಾಣಿ, ಗ್ರೇಡ್-2 ತಹಸೀಲ್ದಾರ್ ಕಿರಣ ಬೆಳವಿ, ಚುನಾವಣೆ ಅಧಿಕಾರಿಗಳಾದ ಬಿ.ಕೆ.ಲಾಳಿ, ಮೋಹನ ದಂಡಿನ, ಶ್ರೀಶೈಲ ಹಿರೇಮಠ, ಪ್ರವೀಣ ಮಾಳಾಜ, ಎಂ.ಎಂ.ಬಾಲ್ದಾರ್, ಸಂತೋಷ ನಾಯಿಕ ಇತರರಿದ್ದರು. ಮತಗಟ್ಟೆ ಅಧಿಕಾರಿಗಳು, ಸಹಾಯಕರು ಸೇರಿ 944 ಸಿಬ್ಬಂದಿಗೆ 30 ಮುಖ್ಯ ತರಬೇತುದಾರರು ಚುನಾವಣೆ ಕರ್ತವ್ಯ ಕುರಿತು ತರಬೇತಿ ನೀಡಿದರು.

    ಯಮಕನಮರಡಿಯಲ್ಲಿ ನಡೆದ ಗುಂಡಿನ ದಾಳಿಗೂ ಗ್ರಾಪಂ ಚುನಾವಣೆಗೂ ಸಂಬಂಧವಿಲ್ಲ. ಇದಕ್ಕೆ ಹಳೇ ವೈಷಮ್ಯ ಕಾರಣ ಎನ್ನಲಾಗುತ್ತಿದ್ದು, ತನಿಖೆ ನಡೆಸಲಾಗುತ್ತಿದೆ. ಚುನಾವಣೆಯಲ್ಲಿ ಅಂತಹ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೋಲಿಸ್ ಇಲಾಖೆ ಎಚ್ಚರಿಕೆ ವಹಿಸಿದೆ.
    | ಅಮರನಾಥ ರೆಡ್ಡಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts