More

    ರೈತ-ಕಾರ್ಮಿಕ ವಿರೋಧಿ ನೀತಿಗಳಿಗೆ ಖಂಡನೆ: ಎಐಡಿಎಸ್‌ಒ ಸಂಘಟನೆಯಿಂದ ಪ್ರತಿಭಟನೆ

    ಚಿತ್ರದುರ್ಗ: ದೇಶದಲ್ಲಿ ಅತ್ಯಾಚಾರ ಪ್ರಕರಣಗಳಿಗೆ ಅಂತ್ಯ ಹಾಡಬೇಕು ಹಾಗೂ ರೈತ-ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಕಾರ್ಯಕರ್ತರು ಮಂಗಳವಾರ ನಗರದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

    ಉತ್ತರ ಪ್ರದೇಶದ ಹಾಥರಸ್‌ನ ಯುವತಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣವನ್ನು ಖಂಡಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಪಿ ಸರ್ಕಾರ ನಿರ್ಲಕ್ಷೃದಿಂದ ನಡೆದುಕೊಂಡಿದೆ. ಫಾಸ್ಟ್ ಟ್ರ್ಯಾಕ್ ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದರು.

    ಪ್ರಕರಣ ದಾಖಲು ಮಾಡದೆ ವಿಳಂಬ ನೀತಿ ಅನುಸರಿಸಿದ್ದ ಪೊಲೀಸ್ ಅಧಿಕಾರಿಗಳಿಗೆ ಶಿಕ್ಷೆ ವಿಧಿಸಬೇಕು. ಮಾದಕ ವಸ್ತು, ಮದ್ಯಪಾನ ನಿಷೇಧಿಸಬೇಕು. ಎಪಿಎಂಸಿ, ವಿದ್ಯುತ್ ಕಾಯ್ದೆ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಕೈ ಬಿಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

    ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಸಂಜಯ್, ಜಿಲ್ಲಾ ಸಮಿತಿ ಸದಸ್ಯರಾದ ಗುರು ಪಟೇಲ್, ಕಾರ್ತಿಕ್, ನಾಗರಾಜ್, ಕುಮುದಾ, ನಿಂಗರಾಜ್ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts