More

  ಪಾದಚಾರಿಗೆ ಡಿಕ್ಕಿ ಹೊಡೆದ; ಮೃತಪಟ್ಟ ಬೈಕ್ ಸವಾರ

  ಹಾವೇರಿ: ಪಾದಚಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರ ಕೆಳಗೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಹಾವೇರಿ-ಕಾಗಿನೆಲೆ ರಸ್ತೆಯಲ್ಲಿ ಸೋಮವಾರ ನಡೆದಿದೆ.
  ಬ್ಯಾಡಗಿ ತಾಲೂಕಿನ ಮಲ್ಲೂರ ಗ್ರಾಮದ ಷಣ್ಮುಖಗೌಡ ಮೂಖನಗೌಡ ಸೊಲಭಗೌಡ್ರ ಮೃತ ಬೈಕ್ ಸವಾರ.
  ಈತ ಹಾವೇರಿ ಕಡೆಯಿಂದ ಕಾಗಿನೆಲೆ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ಮುಂದೆ ಹೋಗುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಕೆಳಗೆ ಬಿದ್ದಿದ್ದರಿಂದ ತಲೆಗೆ ಬಲವಾದ ಪೆಟ್ಟು ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts