ಕಾರು ಡಿಕ್ಕಿಯಾಗಿ ಪಾದಚಾರಿ ಸಾವು

accident raichur
Published on

ಗಂಗೊಳ್ಳಿ: ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿ ಗ್ರಾಮದ ಹೊಸಪೇಟೆಯಲ್ಲಿ ಗುರುವಾರ ನಡೆದುಕೊಂಡು ಹೋಗುತ್ತಿದ್ದವರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದು, ಪಾದಚಾರಿಯೊಬ್ಬರು ಮೃತಪಟ್ಟಿದ್ದಾನೆ. ಕುಪ್ಪ ಪೂಜಾರಿ ಎಂಬುವರು ಮೃತಪಟ್ಟವರು. ಕುಪ್ಪ ಪೂಜಾರಿ ತ್ರಾಸಿಯಿಂದ ಕುಂದಾಪುರ ಕಡೆಗೆ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಹಿಂದಿನಿಂದ ಬಂದ ಕಾರು ಗುದ್ದಿದೆ. ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರ ಸಹಕಾರದಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ಸಂದರ್ಭ ದಾರಿಮಧ್ಯೆ ಮೃತಪಟ್ಟಿದ್ದಾರೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net