

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ ಮಂಜೇಶ್ವರ ಸನಿಹದ ಹೊಸಬೆಟ್ಟು ಎಂಬಲ್ಲಿ ಕಾರು ಡಿಕ್ಕಿಯಾಗಿ ವಾಮಂಜೂರು ಕಜೆ ನಿವಾಸಿ ಮಹಮ್ಮದ್ ಸಾದಿಕ್(40) ಮೃತಪಟ್ಟಿದ್ದಾರೆ. ಸೋಮವಾರ ತಡರಾತ್ರಿ ಮಹಮ್ಮದ್ ಸಾದಿಕ್ ರಸ್ತೆ ದಾಟುತ್ತಿದ್ದ ಸಂದರ್ಭ ಮಂಜೇಶ್ವರದಿಂದ ಹೊಸಂಗಡಿ ಭಾಗಕ್ಕೆ ಸಂಚರಿಸುತ್ತಿದ್ದ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಸಾವು ಸಂಭವಿಸಿದೆ. ಮಂಜೇಶ್ವರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.