ಕುಂದಾಪುರ: ಹೆಮ್ಮಾಡಿ ಗ್ರಾಮದ ಜಾಲಾಡಿ ಎಂಬಲ್ಲಿ ಸೋಮವಾರ ಸಂಜೆ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಪಾದಚಾರಿ ಗಂಭೀರ ಗಾಯಗೊಂಡಿದ್ದಾನೆ. ಹೆಮ್ಮಾಡಿಯ ಜಾಲಾಡಿ ಎಂಬಲ್ಲಿ ರಾ.ಹೆ. 66ರ ಬೈಂದೂರು-ಕುಂದಾಪುರ ರಸ್ತೆಯನ್ನು ದಾಟುತ್ತಿದ್ದ ಮಂಜುನಾಥ ಎಂಬುವರಿಗೆ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಂಜುನಾಥ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಬೈಕ್ ಸವಾರರಿಗೂ ಗಾಯಗಳಾಗಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.