More

    ಪೀಣ್ಯ ಎಲಿವೇಟೆಡ್ ಹೈವೇ ಬಂದ್

    ಬೆಂಗಳೂರು: ತುಮಕೂರು ರಸ್ತೆ ಪೀಣ್ಯ ಎಲಿವೇಟೆಡ್ ಹೈವೇ (ಡಾ. ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ) ಜ.19ವರೆಗೆ ವಾಹನ ಸಂಚಾರ ನಿರ್ಬಂಧಿಸಿ ಸಂಚಾರ ಪೊಲೀಸರು ಆದೇಶಿಸಿದ್ದಾರೆ. ಇದರ ಪರಿಣಾಮ ಸುತ್ತಮುತ್ತಲ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಗಳಿವೆ. ಆದಷ್ಟು ಪೀಣ್ಯ ಎಲಿವೇಟೆಡ್ ಹೈವೇ ಬಳಸುವವರೂ ಪರ್ಯಾಯ ಮಾರ್ಗ ಕಂಡುಕೊಳ್ಳುವುದು ಒಳಿತು.

    ಪೀಣ್ಯ ಎಲಿವೇಟೆಡ್ ಹೈವೇಯಲ್ಲಿ ವಯಾಡಕ್ಟ್ ದುರಸ್ಥಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೊಳ್ಳಲಾಗಿತ್ತು. ಇದೀಗ ವಯಾಡಕ್ಟ್‌ನ ಸಮಗ್ರತೆಯ ಪರಿಶೀಲನೆಯನ್ನು ನಡೆಸಲು ಲೋಡ್ ಟೆಸ್ಟಿಂಗ್ ಅಗತ್ಯವಾಗಿದೆ. ಮಂಗಳವಾರ ರಾತ್ರಿ 11ರಿಂದ ಜ.19ರ ಬೆಳಗ್ಗೆ 11 ಗಂಟೆವರೆಗೂ ಎಲ್ಲ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮನವಿ ಸಲ್ಲಿಸಿದ್ದು, ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ.ಎನ್. ಅನುಚೇತ್ ತಿಳಿಸಿದ್ದಾರೆ.

    ನೆಲಮಂಗಲ ಕಡೆಯಿಂದ ಬೆಂಗಳೂರಿಗೆ ಪ್ಲೈಓವರ್ ರಸ್ತೆಯ ಮೂಲಕ ಸಾಗುವ ವಾಹನಗಳು ಕೆನ್ನಮೆಟಲ್ ವಿಡಿಯಾ ಹತ್ತಿರ ಪ್ಲೈಓವರ್ ಪಕ್ಕದ ಎನ್‌ಎಚ್-4 ರಸ್ತೆ ಹಾಗೂ ಸರ್ವಿಸ್ ರಸ್ತೆಯ ಮೂಲಕ 8ನೇ ಮೈಲಿ, ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಎಸ್‌ಆರ್‌ಎಸ್ ಜಂಕ್ಷನ್ ಮೂಲಕ ಗೊರಗುಂಟೆಪಾಳ್ಯ ತಲುಪ ಬಹುದಾಗಿದೆ.

    ಸಿಎಂಟಿಐ ಜಂಕ್ಷನ್‌ನಿಂದ ನೆಲಮಂಗಲ ಕಡೆಗೆ ಪ್ಲೈಓವರ್ ರಸ್ತೆಯಲ್ಲಿ ಸಾಗುವ ವಾಹನಗಳು ಪಾರ್ಲೆ-ಜಿ ಟೋಲ್ ತಲುಪಲು ಪ್ಲೈಓವರ್ ಪಕ್ಕದ ಎನ್‌ಎಚ್-4ರಸ್ತೆ ಹಾಗೂ ಸರ್ವಿಸ್ ರಸ್ತೆಯಲ್ಲಿ ಎಸ್‌ಆರ್‌ಎಸ್ ಜಂಕ್ಷನ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ 8ನೇ ಮೈಲಿ ಮುಖಾಂತರ ಸಂಚರಿಸಲು ಅನುವು ಮಾಡಿಕೊಡಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts