More

    ಕೇಂದ್ರ ಸರ್ಕಾರ ವಜಾಗೊಳಿಸಲು ಆಗ್ರಹಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

    ಶಿವಮೊಗ್ಗ: ಪೆಗಾಸಸ್ ತಂತ್ರಾಂಶ ದುರ್ಬಳಕೆ ಮಾಡಿಕೊಂಡ ಕೇಂದ್ರ ಸರ್ಕಾರವನ್ನು ತಕ್ಷಣವೇ ವಜಾಗೊಳಿಸುವಂತೆ ಒತ್ತಾಯಿಸಿ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
    ಪೆಗಾಸಸ್ ತಂತ್ರಾಂಶದ ಮೂಲಕ ಇಡೀ ದೇಶದಲ್ಲಿ ಬೇಹುಗಾರಿಕೆ ನಡೆಸಿ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇಸ್ರೇಲ್ ಕಂಪನಿ ರಚಿಸಿದ ತಂತ್ರಾಂಶವನ್ನು ದುರ್ಬಳಕೆ ಮಾಡಿಕೊಂಡಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೀನಾಯ ಕೃತ್ಯ ಎಂದು ಕಿಡಿಕಾರಿದರು.
    ಸುಪ್ರೀಂಕೋರ್ಟ್ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ವಿಎಚ್‌ಪಿ ಮುಖಂಡ ಪ್ರವೀಣ್ ತೊಗಾಡಿಯಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆಪ್ತ ಸಹಾಯಕ, ಹಾಲಿ ಸಿಎಂ ಯಡಿಯೂರಪ್ಪ ಸೇರಿ ಹಲವರನ್ನು ಹಣಿಯಲು ಬೇಹುಗಾರಿಕೆ ಅಸ್ತ್ರ ಪ್ರಯೋಗ ಮಾಡಿದ್ದಾರೆ ಎಂದು ದೂರಿದರು.
    ಹಾಗಾಗಿ ಈ ಪ್ರಕರಣವನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು. ತಂತ್ರಾಂಶವನ್ನು ದುರ್ಬಳಕೆ ಮಾಡಿಕೊಂಡ ಕೇಂದ್ರ ಸರ್ಕಾರವನ್ನು ತಕ್ಷಣವೇ ವಜಾಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
    ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಕೆ.ಚೇತನ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಗಿರೀಶ್, ಕಾರ್ಯಕರ್ತರಾದ ಸಿ.ಜಿ.ಮಧುಸೂದನ್, ವಿನಯ್ ತಾಂಡ್ಲೆ, ಭರತ್, ಬಾಲಾಜಿ, ರವಿ, ವಿಜಯ್, ಚಂದ್ರೋಜಿ, ಪ್ರಮೋದ, ಅಬ್ದುಲ್, ಮುದಾಸಿರ್, ರಾಜು, ಅರ್ಜುನ್, ಮಂಜು, ಅನಿಲ, ರವಿ, ಆಲ್ವಿನ್, ರಾಖಿ, ಸಂಜಯ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts