ಪೆನ್​ಡ್ರೈವ್​ ಹಂಚಿಕೆ ಕೇಸ್​: ಚೇತನ್, ಲಿಖಿತ್‌ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ‌

pp
Published on

ಹಾಸನ: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಹರಿಬಿಟ್ಟ ಆರೋಪ ಪ್ರಕರಣಕ್ಕೆ ಸಂಂಧಿಸಿದಂತೆ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನಗರದ ಎರಡನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್​ಸಿ ಕೋರ್ಟ್​ ಆದೇಶ ನೀಡಿದೆ. ಇಂದು(ಜೂ.01) ಕಸ್ಟಡಿ ಅವಧಿ ಮುಕ್ತಾಯ ಹಿನ್ನೆಲೆ ಎಸ್​ಐಟಿ ಅಧಿಕಾರಿಗಳು ಕೋರ್ಟ್​ಗೆ ಹಾಜರುಪಡಿಸಿದ್ದರು.

ಇದೇ ಮೇ.30 ರಂದು ಅಶ್ಲೀಲ ಪೆನ್​ಡ್ರೈವ್ ಹಂಚಿಕೆ ಪ್ರಕರಣದ ಇಬ್ಬರು ಆರೋಪಿಗಳಾದ ಮಾಜಿ ಶಾಸಕ ಪ್ರೀತಂಗೌಡ ಆಪ್ತ ಲಿಖಿತ್ ಗೌಡ ಹಾಗೂ ಪ್ರೀತಂಗೌಡ ಕಚೇರಿ ಸಹಾಯಕ ಯಲಗುಂದ ಚೇತನ್ ಅವರಿಗೆ ವಾರಕ್ಕೆ ಕೆಲವು ಷರತ್ತುಗಳನ್ನು ವಿಧಿಸಿ ಹಾಸನ ಜೈಲಿನಿಂದ ಬಿಡುಗಡೆ ಮಾಡಿ ಹಾಸನದ 3 ನೇ ಅದಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಮಾಡಿತ್ತು.

ಇದೇ ಮೇ.12 ರಂದು ಎಸ್​ಐಟಿ ಪೊಲೀಸರು ಇಬ್ಬರನ್ನು ಬಂದಿಸಿದ್ದರು. ಇದೀಗ 18 ದಿನಗಳ ಬಳಿಕ ಕೇಸ್​ನ ಆರು ಮತ್ತು ಏಳನೇ ಆರೋಪಿಗಳು ಬಿಡುಗಡೆಯಾಗಿದ್ದಾರೆ.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ​ ವಿಡಿಯೊಗಳನ್ನು ವೈರಲ್ ಮಾಡಲಾಗುತ್ತಿದೆ ಎಂದು ಏಪ್ರಿಲ್ 23ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆರೋಪಿಗಳಾದ ಲಿಖಿತ್​ ಗೌಡ ಮತ್ತು ಚೇತನ್, ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಅವರ ಆಪ್ತರಾಗಿದ್ದಾರೆ. ಮೊದಲಿಗೆ ಪೆನ್‌ಡ್ರೈವ್ ವೈರಲ್ ಸಂಬಂಧ ದಾಖಲಾಗಿದ್ದ ಕೇಸ್‌ನಲ್ಲಿ ಈ ಇಬ್ಬರ ಹೆಸರು ಇರಲಿಲ್ಲ. ನಂತರ ಈ ಇಬ್ಬರ ಮೇಲೆ ವಿಡಿಯೊ ಹಂಚಿಕೆ ಆರೋಪದಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿತ್ತು. ಹೀಗಾಗಿ ಈ ಪ್ರಕರಣವು ದಿನಕ್ಕೊಂದು ತಿರುವನ್ನು ಪಡೆದುಕೊಳ್ಳುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net