More

    ಡಿಕೆಶಿಯೇ ಪೆನ್‌ಡ್ರೈವ್ ಫ್ಯಾಕ್ಟರಿ ಒರಿಜಿನಲ್ ಓನರ್!; ಜೆಡಿಎಸ್ ಕೊಟ್ಟ ಕಾರಣವಿದು

    ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಕುರಿತ ಪೆನ್ ಡ್ರೈವ್ ವಿಚಾರ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ರಾಜಕೀಯ ಕೆಸರೆರಚಾಟಕ್ಕೂ ಈ ವಿಷಯ ಬಳಕೆಯಾಗುತ್ತಿದೆ. ಇದೀಗ ಪೆನ್ ಡ್ರೈವ್ ಹೊರಬರಲು ಡಿಸಿಎಂ ಡಿ.ಕೆ.ಶಿವಕುಮಾರ್ ಕಾರಣ ಎಂದು ಜೆಡಿಎಸ್ ಗಂಭೀರ ಆರೋಪ‌ಮಾಡಿದೆ.
    ದೇವೇಗೌಡರ ಕುಟುಂಬವನ್ನು ಮುಗಿಸಲು ರಾಜ್ಯ ಸರ್ಕಾರ ವ್ಯವಸ್ಥಿತ ಹುನ್ನಾರ ನಡೆಸಿ ಯೋಜಿತವಾಗಿ ಟಾರ್ಗೆಟ್ ಮಾಡಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ಸಂಚು ರೂಪಿಸಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.
    ವಕೀಲ ದೇವರಾಜೇಗೌಡರ ಜತೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಂಡ್ಯದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ನಡೆಸಿರುವ ಮೊಬೈಲ್ ಸಂಭಾಷಣೆಯದ್ದೆನ್ನಲಾದ ಆಡಿಯೋ ತುಣುಕು ಬಹಿರಂಗವಾದ ಬೆನ್ನಲ್ಲಿಯೇ ಜೆಡಿಎಸ್ ತನ್ನ ಅಭಿಪ್ರಾಯ ವ್ಯಕ್ತಮಾಡಿರು.
    ಹೊಂಚು ಹಾಕಿ ಸಂಚು ಮಾಡುವ ಕಾಂಗ್ರೆಸ್‌ನ ಅಸಲಿ ಮುಖ ಕಳಚಿ ಕೆಳಕ್ಕೆ ಬಿದ್ದಿದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ, ಹೌದಲ್ಲವೇ ಕಾಂಗ್ರೆಸ್ಸಿಗರೇ? ಸತ್ಯ ನಿಮ್ಮ ಮುಂದೆಯೇ ಇದೆ. ನಿಮ್ಮ ಅಧ್ಯಕ್ಷರೇ ಪೆನ್ ಡ್ರೈವ್ ಫ್ಯಾಕ್ಟರಿಯ ಒರಿಜಿನಲ್ ಓನರ್ ಎಂದು ಕುಟುಕಿದೆ.
    ಸಿಡಿ ಶಿವಕುಮಾರ್ ಗ್ಯಾಂಗ್ ನಡೆಸಿದ ಪೆನ್‌ಡ್ರೈವ್ ಹಂಚಿಕೆಯ ಹೇಯ ಕೃತ್ಯದ ಸಂಚುಗಳೇ ಅವೆಲ್ಲಾ. ದೇವರಾಜೇಗೌಡರ ಹೇಳಿಕೆಯ ನಂತರ ಹೊರಬಿದ್ದಿರುವ ಆಡಿಯೋ ಟೇಪುಗಳೇ ಮಹಾಸಂಚಿನ ಮಹಾಕಥೆಯನ್ನು ಬಿಚ್ಚಿಟ್ಟಿವೆ. ಈಗ ಹೇಳಿ, ಯಾರು ಮೆಂಟಲ್? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.
    ಸ್ಲೀಪರ್ ಸೆಲ್ ಟೂಲ್ ಕಿಟ್ ಏನು?
    ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಪಖ್ಯಾತಿ ತರುವುದು, ಎಚ್.ಡಿ. ಕುಮಾರಸ್ವಾಮಿ ನಾಯಕತ್ವ ಹಾಳು ಮಾಡುವುದು, ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮುರಿದು ಬೀಳುವಂತೆ ಮಾಡುವುದು, ಎಚ್.ಡಿ.ದೇವೆಗೌಡರ ಜೀವವನ್ನು ಬಲಿ ಪಡೆಯುವುದು ಡಿಕೆಶಿ ಮಾಡಿರುವ ಸಂಚುಗಳು. ಸಂಚು ಜಾರಿಗೆ ಹೂಡಲಿದ್ದ ಬಂಡವಾಳ ಬರೋಬ್ಬರಿ 100 ಕೋಟಿ ರೂ. ಎಂದು ಕಳವಳ ವ್ಯಕ್ತಮಾಡಿದೆ.
    ಎಚ್.ಡಿ.ಕುಮಾರಸ್ವಾಮಿ ಅವರೇ ಪೆನ್ ಡ್ರೈವ್ ಹಂಚಿದ್ದಾರೆ ಎಂದು ಹೇಳಲು ವಕೀಲ ದೇವರಾಜೇಗೌಡರಿಗೆ 100 ಕೋಟಿ ಆಫರ್, ಮುಂಗಡವಾಗಿ 5 ಕೋಟಿ ಹಣವನ್ನು ಬೌರಿಂಗ್ ಕ್ಲಬ್ಬಿನ ಕೊಠಡಿ ಸಂಖ್ಯೆ 110ಕ್ಕೆ ರವಾನೆ ಮಾಡಿದ್ದು, ಇಡೀ ಸಂಚು ಅನುಷ್ಠಾನಕ್ಕೆ ನಾಲ್ವರು ಪ್ರಮುಖ ಸಚಿವರ ಸಮಿತಿ ರಚಿಸಿದ್ದೇ ಶಿವಕುಮಾರ್. ದೇವೇಗೌಡರನ್ನು ಸಾವಿನ ದವಡೆಗೆ ನೂಕುವುದು ಈ ಸ್ಲೀಪರ್ ಸೆಲ್ನ ಮಹಾನ್ ಟಾರ್ಗೆಟ್ ಎಂದು ಹೇಳಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts