More

    ಅಂತ್ಯಸಂಸ್ಕಾರಕ್ಕೆ ತೆರಳುವಾಗ ಹೆಜ್ಜೇನು ದಾಳಿ, ಶವ ಬಿಟ್ಟು ಓಡಿಹೋದ ಜನರು..

    ಮಂಡ್ಯ: ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಹೆಜ್ಜೇನು ದಾಳಿ ನಡೆಸಿದ್ದರಿಂದ ಭಯಗೊಂಡ ಸಂಬಂಧಿಕರು ಶವವನ್ನು ಬಿಟ್ಟು ಓಡಿಹೋದ ಪ್ರಸಂಗ ನಡೆದಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ.

    ಗ್ರಾಮದ ಧರ್ಮರಾಜ್ ಎಂಬವರು ಮೃತಪಟ್ಟಿದ್ದು, ಪಾರ್ಥಿವ ಶರೀರವನ್ನು ಅಂತ್ಯಸಂಸ್ಕಾರಕ್ಕೆ ಕೊಂಡೊಯ್ಯುವಾಗ ಮಾರ್ಗಮಧ್ಯೆ ಹೆಜ್ಜೇನು ದಾಳಿ ನಡೆಸಿದೆ. ಆಗ ದಾಳಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಶವವನ್ನು ಬಿಟ್ಟು ಓಡಿಹೋಗಿದ್ದರು.

    ಈ ಸಂದರ್ಭದಲ್ಲಿ 40ಕ್ಕೂ ಹೆಚ್ಚು ಮಂದಿಗೆ ಹೆಜ್ಜೇನು ಕಚ್ಚಿದೆ. ಹೆಜ್ಜೇನು ದಾಳಿಯಿಂದ ಅಸ್ವಸ್ಥಗೊಂಡವರಿಗೆ ಪಾಂಡವಪುರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬಳಿಕ ಕೆಲವೇ ಕೆಲವು ಮಂದಿ ಸಮ್ಮುಖದಲ್ಲಿ ಕುಟುಂಬಸ್ಥರು ಅಂತ್ಯಸಂಸ್ಕಾರ ನೆರವೇರಿಸಿದರು.

    ‘ದೊಡ್ಡ’ದಾದ ಜಾತಿ-ಮೀಸಲಾತಿ ವಿವಾದ, ಐತಿಹಾಸಿಕ ದೇವಸ್ಥಾನದ ಟೆಂಡರೇ ರದ್ದು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts