More

    ಬೆಂಗಳೂರು ಸೇರಿದಂತೆ ರಾಜ್ಯ ವಿವಿಧೆಡೆ ಧಾಕಾಕಾರ ಮಳೆ; ಜನಜೀವನ ಅಸ್ತವ್ಯಸ್ತ

    ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸೋಮವಾರ ಗುಡುಗು ಸಹಿತ ಮಳೆಯಾಗಿದ್ದು, ಜನಜೀವನವಾಗಿ ಅಸ್ತವ್ಯಸ್ತಗೊಂಡಿದೆ. ಸೋಮವಾರ ರಾತ್ರಿ 10 ಘಂಟೆ ನಂತರ ಗುಡುಗು ಸಹಿತ ಮಳೆ ಸುರಿದ ಪರಿಣಾಮ ನಗರದ ಹಲವು ಕೆಳಸೇತುವೆಗಳು ಜಲಾವೃತಗೊಂಡು ವಾಹನ ಸವಾರರು ಪೊರದಾಡುವಂತಾಯಿತು.

    ಬೆಂಗಳೂರು ನಗರದ ಮೆಜೆಸ್ಟಿಕ್, ಶಾಂತಿನಗರ, ವಿಜಯನಗರ, ಜಯನಗರ, ರಾಜಾಜಿನಗರ, ಚಂದ್ರಾಲೇಔಟ್, ಹೆಬ್ಬಾಳ, ಸದಾಶಿವನಗರ, ಬನಶಂಕರಿ, ಜೆ.ಪಿ.ನಗರ, ಕೋರಮಂಗಲ, ಮತ್ತಿಕೆರೆ, ಯಶವಂತಪುರ, ಯಲಹಂಕ, ದಾಸರಹಳ್ಳಿ, ನಾಯಂಡಹಳ್ಳಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ನಗರದಲ್ಲಿ ಮಂಗಳವಾರ ಹಾಗೂ ಬುಧವಾರ ಧಾರಕಾರ ಮಳೆಯಾಗುವ ಸಾಧ್ಯತೆಯಿದೆ ಎಮದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರರು ಮಳೆಯಿಂದಾಗಿ ಪರದಾಟ ನಡೆಸಿದರು. ಒಂದು ಘಂಟೆಯ ಮಳೆಗೆ ತಗ್ಗುಪ್ರದೇಶಗಳು ಜಲಾವೃತಗೊಂಡಿದ್ದು, ನಗರದ ಹಲವು ಅಂಡರ್ ಪಾಸ್​ಗಳಲ್ಲಿ ನೀರು ತುಂಬಿಕೊಂಡಿದೆ. ಕಲೆವು ಪ್ರದೇಶಗಳಲ್ಲಿ ಮರ ಉರುಳಿ ವಿದ್ಯುತ್​ ಕೈಕೊಟ್ಟ ಪರಿಣಾಮ ಜನರು ಪರದಾಡುವಂತಾಯಿತು.

    ಬೆಂಗಳೂರು ಸೇರಿದಂತೆ ರಾಜ್ಯ ವಿವಿಧೆಡೆ ಧಾಕಾಕಾರ ಮಳೆ; ಜನಜೀವನ ಅಸ್ತವ್ಯಸ್ತ

    ಇದನ್ನೂ ಓದಿ: ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್​ಗೆ ಬಿಗ್ ಶಾಕ್; ಬಿಜೆಪಿ ಸೇರಿದ ಹಾಲಿ ಶಾಸಕ

    ಜೀವ ಸೆಲೆಯಂತಾದ ಮಳೆ

    ಬೆಂಗಳೂರು ಹೊತರುಪಡಿಸಿ ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಬಾಗಲಕೋಟೆ, ಕಲಬುರ್ಗಿ, ಯಾದಗಿರಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಆ ಮೂಲಕ ಮಳೆ ಇಲ್ಲದೆ ಕಂಗಾಲಿದ್ದ ಜನರಿಗೆ ವರುಣ ದೇವ ತಂಪೆರೆದಿದ್ದಾನೆ. ಗುಡುಗು ಸಿಡಿಲು ಸಮೇತ ಕೆಲಕಾಲ ಧಾರಕಾರ ಮಳೆಯಾಗಿದೆ. ಆದರೆ ಕಟಾವಿಗೆ ಬಂದಬೆಳೆಗಳು ಹಾನಿಯಾಗುವ ಭಯದಲ್ಲಿ ರೈತರಿದ್ದಾರೆ.

    ಹಿಂಗಾರು ಮಳೆ ಆಗದೆ ಬಾಗಲಕೋಟೆ ರೈತರು ಕಂಗಾಲಾಗಿದ್ದರು. ಆದರೆ ಇಂದು ಮಳೆಯಾಗಿದ್ದರಿಂದ ಅನ್ನದಾತರ ಮುಖದಲ್ಲಿ ಸಂತಸ ಮೂಡಿದೆ. ಅರ್ಧ ಗಂಟೆಗೂ ಅಧಿಕ ಕಾಲ ಜಿಟಿ ಜಿಟಿ ಮಳೆ ಸುರಿದಿದೆ. ಹಿಂಗಾರು ಬೆಳೆಗಳಿಗೆ ಈ ಮಳೆ ಜೀವ ಸೆಲೆಯಂತಾಗಿದೆ. ಅಲ್ಲದೆ, ರೈತರಿಗೆ ಅಲ್ಪ ಭರವಸೆ ಮೂಡಿದೆ.

    ಕೋಟೆನಾಡು ಚಿತ್ರದುರ್ಗ ನಗರದಲ್ಲಿ ಧಾರಾಕಾರ ಮಳೆಯಾಗಿದ್ದು, ಹಲವೆಡೆ ರಸ್ತೆಗಳು ಬಹುತೇಕ ಜಲಾವೃತಗೊಂಡಿತು. ಗುಮಾಸ್ತ ಕಾಲೋನಿಯಲ್ಲಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತು. ಚಿಕ್ಕಬಳ್ಳಾಫುರದಲ್ಲಿಯೂ ಮಳೆರಾಯನ ಆಗಮನವಾಗಿದ್ದು, ಮಳೆ ಕಂಡು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts