ವಾಟರ್ ಟ್ಯಾಂಕ್ ಹತ್ತಿದ ರಾಹುಲ್ ಗಾಂಧಿಗೆ ಸಾಥ್ ನೀಡಿದ ಸಿದ್ದರಾಮಯ್ಯ

Rahul
Published on

ಚಿತ್ರದುರ್ಗ: ಭಾರತ್ ಜೋಡೋ ಯಾತ್ರೆಯ ಸಂದರ್ಭ ರಾಹುಲ್ ಗಾಂಧಿಯನ್ನು ನೋಡಲು ಜನರು ಮುಗಿಬೀಳುತ್ತಿದ್ದಾರೆ. ಇದೀಗ ರಾಹುಲ್ ಗಾಂಧಿ ಮರಳಹಳ್ಳಿಯಲ್ಲಿರುವ ನೀರಿನ ಟ್ಯಾಂಕ್​ ಹತ್ತಿ ಕಾರ್ಯಕರ್ತರಿಗೆ ಇನ್ನಷ್ಟು ಹುರುಪು ತಂದಿದ್ದಾರೆ. ರಾಹುಲ್ ಗಾಂಧಿ ಟ್ಯಾಂಕ್​ ಮೇಲೆ ಏರಿ ಕಾಂಗ್ರೆಸ್ ಬಾವುಟ ಹಾರಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಜೋರು ಶಿಳ್ಳೆ, ಚಪ್ಪಾಳೆ ಹೊಡೆದು ಸಂಭ್ರಮಿಸಿದ್ದಾರೆ. ಸಿದ್ದರಾಮಯ್ಯ ಕೂಡಾ ಟ್ಯಾಂಕ್ ಹತ್ತಿ ಸಾಥ್​ ನೀಡಿದ್ದಾರೆ.

ಸಚಿವ ಶ್ರೀರಾಮುಲು ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನ ಮಾಡಿದ ರಾಹುಲ್ ಗಾಂಧಿ ಸಾರ್ವಜನಿಕ ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು. ಆರ್​​ಎಸ್​​ಎಸ್​​ ಕನ್ನಡ ವಿರೋಧಿಯಾಗಿದ್ದು, ಹಿಂದಿ ಹೇರಿಕೆ ಮಾಡುತ್ತಿದೆ. ಆಯಾ ರಾಜ್ಯಗಳ ಪ್ರಾದೇಶಿಕತೆಗೆ ಆದ್ಯತೆ ನೀಡುವ ಕೆಲಸ ಆಗಬೇಕು. ಆದರೆ ಬಿಜೆಪಿ ದೇಶ ಒಡೆಯುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.

ಭಾರತ್ ಜೋಡೋ ಯಾತ್ರೆ ಮೊಳಕಾಲ್ಮೂರು ತಲುಪುತ್ತಿದ್ದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ನೋಡಲು ಜನರ ಮುಗಿಬಿದ್ದಿದ್ದಾರೆ. ಈ ವೇಳೆ ಜನರನ್ನು ನಿಯಂತ್ರಿಸಲು ಪೊಲೀಸರು ಹರ ಸಾಹಸ ಪಟ್ಟಿದ್ದಾರೆ. ನಂತರ ಬ್ಯಾರಿಕೇಡ್​​ನಿಂದ ಜನರ ನಿಯಂತ್ರಣ ಮಾಡಿ, ಸಿದ್ದರಾಮಯ್ಯ ಅವರ ಕಾರು ಹೋಗಲು ಅವಕಾಶ ಮಾಡಿಕೊಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net